May 17, 2024

Bhavana Tv

Its Your Channel

ರಾಷ್ಟ್ರೋತ್ಥಾನ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬಾಗೇಪಲ್ಲಿ:-ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದಲ್ಲೇ ಎಂಥ ವಿಪತ್ತೂ ಸಂಭವಿಸಿದರೂ ತಮ್ಮ ಜೀವದ ಹಂಗು ತೊರೆದು ಸೇವೆಗೆ ಮುಂದಾಗುತ್ತದೆ.
ಇದರ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಬಿಜೆಪಿ ಪಕ್ಷದ ಯುವ ಮೋರ್ಚಾ ಹಾಗೂ ರಾಷ್ಟ್ರೋತ್ಥಾನ ರಕ್ತ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಹಾಗೂ ಭಾರತದ ಸ್ವಾತಂತ್ರ‍್ಯ ಹೋರಾಟಗಾರರು ಹಾಗೂ ವೀರ ಯೋಧರ ಸ್ಮರಣಾರ್ಥ ಅಂಗವಾಗಿ ಬಾಗೇಪಲ್ಲಿ ಪಟ್ಟಣದ ಹೊರವಲಯದ ಶ್ರೀ ಕ್ಷೇತ್ರ ಗಡಿದಂ ಶ್ರೀ ಗಾಯತ್ರಿ ಬ್ರಾಹ್ಮಣರು ಸಮದಾಯ ಭವನದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾದ್ಯಕ್ಷ ರಾಮಲಿಂಗಪ್ಪ ಉದ್ಘಾಟನೆ ಮಾಡಿ ಮಾತನಾಡಿ

ಕೋವಿಡ್ ಸಂಕಷ್ಟದ ಸಮಯದಲ್ಲಿ ರಕ್ತದ ಅಭಾವ ಎದುರಾಗಿರುವುದನ್ನು ಮನಗಂಡು, ಬಾಗೇಪಲ್ಲಿ ಬಿಜೆಪಿ ಪಕ್ಷದ ಯುವ ಮೋರ್ಚಾ ಹಾಗೂ ರಾಷ್ಟ್ರೋತ್ಥಾನ ರಕ್ತ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಿ ಸುಮಾರು ೪೫ ಯುನಿಟ್ ರಕ್ತದಾನ ಮಾಡಿರುವ ಬಿಜೆಪಿ ಪಕ್ಷದ ಕಾರ್ಯಕರ್ತರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ, ದಾನದಿಂದಲೇ ಪಡೆಯಬೇಕಾದ ಅನಿವಾರ್ಯತೆ ಇದೆ. ಇದೇ ಕಾರಣಕ್ಕೆ ಎಲ್ಲರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಜೀವದಾನಕ್ಕೆ ಮುಂದಾಗಿದ್ದಾರೆ. ಎಂದು ಹೇಳಿದರು.
ಬಾಗೇಪಲ್ಲಿ ಪಟ್ಟಣದ ಯುವ ಮೋರ್ಚಾ ಅದ್ಯಕ್ಷ ಕೆ.ವಿ.ಮಂಜುನಾಥ ರೆಡ್ಡಿ ಮಾತನಾಡಿ ಕೊರೋನಾ ಹಿನ್ನೆಲೆಯಲ್ಲಿ ರಕ್ತದ ಕೊರತೆಯುಂಟಾಗಿತ್ತು. ಬೇಡಿಕೆಗೆ ತಕ್ಕಂತೆ ರಕ್ತ ಪೂರೈಕೆ ದೊಡ್ಡ ಸವಾಲಾಗಿತ್ತು. ಕೆಲ ಯುವಕರು ತಾವಾಗಿಯೇ ಮುಂದೆ ಬಂದು ನಮ್ಮ ಬ್ಲಡ್ ಬ್ಯಾಂಕ್‌ನಲ್ಲಿ ರಕ್ತದಾನ ಶಿಬಿರ ನಡೆಸಿದ್ದಾರೆ. ಇದರಿಂದ ಸುಮಾರು ೪೫ ಯುನಿಟ್ ಬ್ಲಡ್ ನಮ್ಮಲ್ಲಿಗ ಸಂಗ್ರಹವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ಮಂಡಲಾದ್ಯಕ್ಷ ಪ್ರತಾಪ್,
ವೆಂಕಟೇಶ್ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಸುರೇಶ್ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ, ಎಸ್. ಸಿ ಯುವ ಮೋರ್ಚಾ ಅದ್ಯಕ್ಷ ಹಾಗೂ ಕೆಡಿಪಿ ಸದಸ್ಯರಾದ ವೆಂಕಟೇಶ್,ಪ್ರಭಾಕರ ರೆಡ್ಡಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಸುಬ್ರಹ್ಮಣ್ಯಂ ,ಲೋಕೇಶ್, ಗೋಪಾಲ್,ದೀರಜ್,ಮಂಜುಳಾ, ವನಜಾ,ರೂಪಾ,
ಗಂಗುಲಮ್ಮ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ:- ರಾ.ನ.ಗೋಪಾಲ ರೆಡ್ಡಿ ಬಾಗೇಪಲ್ಲಿ ತಾಲ್ಲೂಕು

error: