May 17, 2024

Bhavana Tv

Its Your Channel

ಸ್ವಾತಂತ್ರ‍್ಯ ಸೇನಾನಿಗಳ ತ್ಯಾಗ ಬಲಿದಾನಗಳ ವಿಚಾರಗಳನ್ನು ಇಂದಿನ ಯುವಪೀಳಿಗೆ ಮಾದರಿಯಾಗಿ ಸ್ವೀಕರಿಸಿ – ರೇಷ್ಮೆ ಇಲಾಖೆ ನಿರ್ದೇಶಕ ಚಿನ್ನ ಕೈವಾರಮಯ್ಯ

ಬಾಗೇಪಲ್ಲಿ:- ಅವರು ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ ೭೫ ನೇ ಸ್ವಾತಂತ್ರ‍್ಯ ದಿನಾಚರಣೆಯ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು. ಬ್ರಿಟಿಷರ ದಾಸ್ಯದಿಂದ ಮುಕ್ತ ಮಾಡಿದ ಸ್ವಾತಂತ್ರ‍್ಯ ಸೇನಾನಿಗಳ
ಅವಿರತ ಹೋರಾಟ ಮಾಡಿ ಸಾವಿರಾರು ದೇಶಪ್ರೇಮಿಗಳು ತಮ್ಮ ಇಡೀ ಬದುಕನ್ನೇ ದೇಶಕ್ಕಾಗಿ ಸಮರ್ಪಿಸಿದ್ದಾರೆ. ಪರಕೀಯರ ದಾಸ್ಯದ ಕಪಿಮುಷ್ಠಿಯಿಂದ ದೇಶವನ್ನು ಬಿಡುಗಡೆ ಮಾಡಲು ಹಾಗೂ ದೇಶದ ಎಲ್ಲಾ ಪ್ರಜೆಗಳು ಸ್ವತಂತ್ರವಾಗಿ ಜೀವನ ಮಾಡಲು ಲೆಕ್ಕವಿಲ್ಲದಷ್ಟು ತ್ಯಾಗ ಬಲಿದಾನಗಳ ವಿಚಾರಗಳನ್ನು ಇಂದಿನ ಯುವಪೀಳಿಗೆ ಗಂಭೀರವಾಗಿ ಪರಿಗಣಿಸಿ ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಶದ ಋಣವನ್ನು ತೀರಿಸಬೇಕು.

ಇದಕ್ಕೆ ಮುಂಚೆ ಬಾಗೇಪಲ್ಲಿ ತಾಲ್ಲೂಕು ತಹಶಿಲ್ದಾರ್ ಡಿ. ಎ.ದಿವಾಕರ್ ಅಮೃತ ಮಹೋತ್ಸವದ ೭೫ ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮಾಡಿ ತದನಂತರ ಸಂದೇಶವನ್ನು ನೀಡಿ ಮಾತನಾಡಿ ೭೫ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಹೆಮ್ಮೆಯಿಂದ ಆಚರಿಸುತ್ತಿದೆ. ಪ್ರತಿವರ್ಷ ಸಾಕಷ್ಟು ಸಡಗರ, ಸಂಭ್ರಮದಿAದ ಆಚರಿಸುವ ಸ್ವಾತಂತ್ರ‍್ಯ ದಿನವನ್ನು ಈ ವರ್ಷ ಕೊರೋನಾ ಮಹಾಮಾರಿ ಆಕ್ರಮಿಸಿರುವ ಹಿನ್ನೆಲೆ ಸರಳವಾಗಿ ಆಚರಿಸಲಾಗುತ್ತಿದೆ. ಆಚರಣೆ ಸರಳವಾದರೂ ಸಾಕಷ್ಟು ಹೋರಾಟದ ನಂತರ ಬ್ರಿಟೀಷರಿಂದ ಸಿಕ್ಕ ಸ್ವಾತಂತ್ರ‍್ಯದ ಮೌಲ್ಯ ದೇಶದ ಪ್ರತಿ ಪ್ರಜೆಗೂ ತಿಳಿದಿದೆ. ಇದಕ್ಕಾಗಿ, ದೇಶಕ್ಕಾಗಿ ಮಡಿದ ಸಾವಿರಾರು ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ನಾವೆಲ್ಲಾ ಹೆಮ್ಮೆ, ಗೌರವದಿಂದ ಸ್ವಾತಂತ್ರ‍್ಯ ದಿನವನ್ನು ಆಚರಿಸೋಣ. ಎಂದು ಹೇಳಿದರು

ಕೋವಿಡ್-೧೯ ಒಂದು ಮತ್ತು ಎರಡನೇ ಅಲೆಯಲ್ಲಿ ಅವಿರತವಾಗಿ ಸೇವೆ ಸಲ್ಲಿಸಿ ಕರೋನ ವಾರಿಯರ್ಸ್ ಗೆ ಆತ್ಮೀಯವಾಗಿ ಕನ್ನಡ ಪುಸ್ತಕವನ್ನು ನೀಡಿ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು..
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಇಓ ಮಂಜುನಾಥ ಸ್ವಾಮಿ, ಕೃಷಿ ಇಲಾಖೆ ನಿರ್ದೇಶಕ ಕೆ.ಸಿ.ಮಂಜುನಾಥ, ಬಿಇಓ ಎಸ್ ಸಿದ್ದಪ್ಪ, ಆರಕ್ಷಕ ವೃತ್ತ ನಿರೀಕ್ಷಿಕ ಡಿ.ಆರ್.ನಾಗರಾಜು, ಪುರಸಭೆ ಮುಖ್ಯಾಧಿಕಾರಿ ಕೆ.ಮಧುಕರ್, ತಾಲ್ಲೂಕು ಆರೋಗ್ಯ ಅಧಿಕಾರಿ ಸಿ.ಎನ್.ಸತ್ಯನಾರಾಯಣ ರೆಡ್ಡಿ, ದೈಹಿಕ ಶಿಕ್ಷಣ ಪರವೀಕ್ಷಕ ಜಯರಾಮ್, ಇಸಿಓ ಆರ್.ಹನುಮಂತ ರೆಡ್ಡಿ, ಕೆ.ಬಿ.ಆಂಜನೇಯ ರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವಿ.ವೆಂಕಟರವಣ, ಪ್ರಧಾನ ಕಾರ್ಯದರ್ಶಿ ಸಿ.ವೆಂಕಟರಾಯಪ್ಪ, ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ :-ರಾ.ನ.ಗೋಪಾಲ ರೆಡ್ಡಿ ಬಾಗೇಪಲ್ಲಿ

error: