May 17, 2024

Bhavana Tv

Its Your Channel

ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಬಾಗೇಪಲ್ಲಿ :ತಾಲ್ಲೂಕು ಘಂಟAವಾರಿಪಲ್ಲಿ ಕಸಬಾ ಹೋಬಳಿ ಪುಟ್ಟಪರ್ತಿ ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರ ಸಂಘ ೮,೭೫,೦೦೦ ಸಾವಿರ ರೂ ಗಳ ವೆಚ್ಚದ ಸುಸಜ್ಜಿತ ನೂತನ ಕಟ್ಟಡವನ್ನು ಹಾಗೂ ಪುಟ್ಟಪರ್ತಿ ಹಾಲು ಉತ್ಪಾದಕ ಸಹಕಾರ ಸಂಘದ ವತಿಯಿಂದ ಸುಮಾರು ೨೦,೦೦,೦೦೦ ಲಕ್ಷ ರೂಪಾಯಿ ವೆಚ್ಚದಲ್ಲಿ ೩೬೫೦ ಹಾಲು ಉತ್ಪಾದಕರ ಸದಸ್ಯರಿಗೆ ದಿನಸಿ ಕಿಟ್ ಅನ್ನು ಬಾಗೇಪಲ್ಲಿ ವಿಧಾನ ಸಭೆ ಕ್ಷೇತ್ರದ ಜನಪ್ರಿಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ೫ ಜನ ಹಾಲು ಉತ್ಪಾದಕ ಸದಸ್ಯರಿಗೆ ಸಾಂಕೇತವಾಗಿ ವಿತರಣೆ ಮಾಡಿ ಮಾತನಾಡಿದರು.

ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಹಾಗೂ ರೈತರು ಸಹಕಾರ ಸಂಘದ ಮೂಲಕ ವಹಿವಾಟು ಮಾಡಿದಲ್ಲಿ ಸಂಘ ಹಾಗೂ ಹಾಲು ಉತ್ಪಾದಕರಿಬ್ಬರೂ ಉತ್ತಮ ಲಾಭಾಂಶ ಪಡೆಯಬಹುದು ಮನೆಗೊಂದು ಹಸುವನ್ನು ಸಾಕುವ ಮೂಲಕ ಆರ್ಥಿಕ ಅಭಿವೃದ್ಧಿ ಹೊಂದುವುದು ಸೇರಿದಂತೆ ಸಂಘ ಹಾಗೂ ಸರ್ಕಾರ ದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ೨೪ ಮಹಿಳಾ ಸಂಘಗಳಿಗೆ ೧,೩೬.೦೦೦ ಸಾವಿರ ರೂಪಾಯಿ ವೆಚ್ಚದಲ್ಲಿ ಪೀಠೋಪಕರಣಗಳನ್ನು ವಿತರಣೆ ಮಾಡಿದರು.೨,೧೦,೦೦೦ ಲಕ್ಷ ರೂಪಾಯಿ ವೆಚ್ಚದಲ್ಲಿ ಸುಮಾರು ಎಂಟು ಸರ್ಕಾರಿ ಶಾಲೆಗಳಿಗೆ ಅಂದರೆ ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಮಾದರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಗೆ ೩ ಕಂಪ್ಯೂಟರ್, ಗೂಳೂರು ,ಸದ್ದಪಲ್ಲಿ, ದೇವರಗುಡಿಪಲ್ಲಿ, ದೇವರೆಡ್ಡಿ ಪಲ್ಲಿ ಕೊಂಡರೆಡ್ಡಿಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ತಲಾ ಒಂದೊAದು ಕಂಪ್ಯೂಟರ್ ಸಿಸ್ಟಮ್ ಅನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕೊಚಿಮುಲ್ ನಿರ್ದೇಶಕ ಮಂಜುನಾಥ ರೆಡ್ಡಿ, ಸುನಂದಮ್ಮ, ಲಕ್ಷ್ಮೀ ನರಸಿಂಹಪ್ಪ, ಶ್ರೀನಿವಾಸ್ ರೆಡ್ಡಿ, ಆನಂದ, ಆರ್.ಹನುಮಂತ ರೆಡ್ಡಿ, ಕೆ.ಬಿ.ಆಂಜನೇಯ ರೆಡ್ಡಿ, ಸೋಮಶೇಖರ್ ರೆಡ್ಡಿ, ಶುಭಾ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ:- ರಾ.ನ.ಗೋಪಾಲ ರೆಡ್ಡಿ ಬಾಗೇಪಲ್ಲಿ ತಾಲ್ಲೂಕು

error: