April 25, 2024

Bhavana Tv

Its Your Channel

ಶಿಕ್ಷಕರೇ ರಾಜಕೀಯದಿಂದ ದೂರವಿರಿ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ: ರಾಜಕೀಯ ಮಾಡುವುದನ್ನು ಬಿಟ್ಟು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒಲವು ತೋರಿಸುವ ಮೂಲಕ ನವ ಸಮಾಜವನ್ನು ನಿರ್ಮಾಣ ಮಾಡುವ ಕೆಲಸಕ್ಕೆ ಮುಂದಾಗುವAತೆ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಶಿಕ್ಷಕರಿಗೆ ಕರೆ ನೀಡಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾರತ ರತ್ನ ಡಾ.ಎಸ್.ರಾಧಾಕೃಷ್ಣ ರವರ ೧೩೪ ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಡೀ ವಿಶ್ವದಲ್ಲಿ ಶಿಕ್ಷಕ ವೃತ್ತಿಯಲ್ಲಿ ಸಿಗುವಂತಹ ಗೌರವ ಯಾವುದೇ ವೃತ್ತಿಯಲ್ಲಿ ಸಿಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಹಿಂದಿನ ದಿನಗಳಲ್ಲಿ ಶಿಕ್ಷಕರು ಮಕ್ಕಳನ್ನು ಹೊಡೆದು ಬಡಿದು ವಿದ್ಯೆ ಬುದ್ದಿ ಹೇಳುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆಯೇ ಬದಲಾಗಿದೆ, ಯಾವುದೇ ಕಾರಣಕ್ಕೂ ಮಕ್ಕಳ ಮೇಲೆ ಕೈ ಮಾಡುವಂತಿಲ್ಲ, ಕೈ ಮಾಡಿದರೆ ತಕ್ಷಣ ಆ ವಿದ್ಯಾರ್ಥಿಗಳ ಪೋಷಕರು ಪೊಲೀಸರಿಗೆ ದೂರು ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಶಿಕ್ಷಕರು ರಾಜಕೀಯ ಮಾಡಬೇಡಿ, ರಾಜಕೀಯ ಮಾಡುವುದರಿಂದ ನೀವು ಯಾವುದೇ ಕಾರಣಕ್ಕೂ ಉತ್ತಮ ಶಿಕ್ಷಕರು ಎನಿಸಿಕೊಳ್ಳಲು ಸಾಧ್ಯವೇ ಇಲ್ಲ. ರಾಜಕೀಯದಲ್ಲಿ ಸಮತೋಲನ ಮಾಡಲು ಸಾಧ್ಯವಿಲ್ಲ. ರಾಜಕೀಯ ಎಂದರೆ ದ್ವೇಷ, ಪಕ್ಷಪಾತ ಹೆಚ್ಚಾಗಿರುತ್ತೆ ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಪ್ರೀತಿ, ಪ್ರೇಮ ನೀಡಲು ಸಾಧ್ಯವಿಲ್ಲ, ಎಲ್ಲರನ್ನು ಸಮಾನತೆಯಿಂದ ನೋಡಬೇಕಾಗಿರುವ ಶಿಕ್ಷಕರು ರಾಜಕೀಯದಿಂದ ಹೊರಬನ್ನಿ ಎಂದು ಸಲಹೆ ನೀಡಿದರು.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರು ಹಾಗೂ ನಿವೃತ್ತಿ ಹೊಂದಿರುವ ಶಿಕ್ಷರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ದಿವಾಕರ್, ಬಾಗೇಪಲ್ಲಿ ತಾಲ್ಲೂಕು ಬಿಇಓ ಎಸ್. ಸಿದ್ದಪ್ಪ, ತಾ.ಪಂ ಇಒ ಮಂಜುನಾಥಸ್ವಾಮಿ, ಪುರಸಭೆ ಉಪಾಧ್ಯಕ್ಷ ಎ.ಶ್ರೀನಿವಾಸ್, ಸದಸ್ಯರಾದ ನಂಜುAಡಪ್ಪ, ಸರ್ಕಾರಿ ನೌಕರರ
ಸಂಘದ ಗೌರವಾಧ್ಯಕ್ಷ ಹನುಮಂತರೆಡ್ಡಿ, ಬಾಗೇಪಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸತ್ಯನಾರಾಯಣ ರೆಡ್ಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಡಿವೈಪಿಸಿ ಡಿ.ಎನ್.ಸುಕನ್ಯಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವೆಂಕಟರವಣ, ಶಿಕ್ಷಣ ಸಮನ್ವಯ ಅಧಿಕಾರಿ ವೆಂಕಟರಾಮಪ್ಪ, ಮತ್ತಿತರರು ಇದ್ದರು.

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: