April 25, 2024

Bhavana Tv

Its Your Channel

ದಲಿತ ಹೆಣ್ಣು ಮಕ್ಕಳ ಮೇಲೆ ಹಲ್ಲೆ ದೌರ್ಜನ್ಯ ಎಸಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ಹಾಗೂ ಗಡಿಪಾರು ಮಾಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಆಗ್ರಹ

ಬಾಗೇಪಲ್ಲಿ:- ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಸೆಪ್ಟೆಂಬರ್ ೪ ರಂದು ತಾಡಿಗೋಳ್ ಗ್ರಾಮದ ಬಳಿ ದಲಿತ ಹೆಣ್ಣು ಮಕ್ಕಳ ಮೇಲೆ ಹಲ್ಲೆ ದೌರ್ಜನ್ಯ ಎಸಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಬಾಗೇಪಲ್ಲಿ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸದಸ್ಯರು ಸೋಮವಾರ ಪಟ್ಟಣದ ತಹಶಿಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದರು. ತದನಂತರ ಉಪ ತಹಶಿಲ್ದಾರ್ ಸುಬ್ರಹ್ಮಣ್ಯಂ ಅವರಿಗೆ ಮನವಿ ಸಲ್ಲಿಸಿದರು.

ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಹಲ್ಲೆಗೊಳಗಾಗಿರುವ ವಿದ್ಯಾರ್ಥಿನಿಯರು ಹಾಗೂ ಅವರ ಕುಟುಂಬಗಳಿಗೆ ಪೊಲೀಸ್ ರಕ್ಷಣೆ ನೀಡಬೇಕು. ಜಿಮ್ ಅನಿಲ್ ಮತ್ತು ಆತನ ಸಹಚರರನ್ನು ಗಡಿಪಾರು ಮಾಡಬೇಕು. ದಲಿತರ ಮೇಲೆ ದೌರ್ಜನ್ಯ ಕಾಯ್ದೆಯಡಿ ನಿಯಮಿತವಾಗಿ ಸಭೆ ನಡೆಸಬೇಕು. ಇಂಥ ಘಟನೆಗಳು ಸಂಭವಿಸಿದಾಗ ಕೇಸ್ ಮತ್ತು ಕೌಂಟರ್ ಕೇಸ್ ದಾಖಲಿಸುವುದನ್ನು ಬಿಡಬೇಕು ಎಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಬಿ.ವಿ.ವೆಂಕಟರವಣ ಮಾತನಾಡಿ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಬಳಿ ದಲಿತ ಹೆಣ್ಣು ಮಕ್ಕಳ ಮೇಲೆ ಹಲ್ಲೆ ದೌರ್ಜನ್ಯ ಎಸಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದರು.

ಚಿಂತಾಮಣಿಯ ಕಾಲೇಜಿಗೆ ಬಸ್‌ನಲ್ಲಿ ಹೋಗುತ್ತಿದ್ದ ಹೆಣ್ಣು ಮಕ್ಕಳ ಮೇಲೆ ಸವರ್ಣೀಯ ಯುವಕರ ಗುಂಪು ದೌರ್ಜನ್ಯ ನಡೆಸಿದೆ. ಬಸ್ ಅಡ್ಡಗಟ್ಟಿ ಹೆಣ್ಣು ಮಕ್ಕಳ ಮೇಲೆ ಯುವಕರು ಹಲ್ಲೆ ನಡೆಸಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೆಣ್ಣು ಮಕ್ಕಳ ಸಂಬAಧಿಕರ ಮೇಲೆ ಯುವಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಈ ಘಟನೆಯಿಂದ ಹೆಣ್ಣು ಮಕ್ಕಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಮತ್ತೊಂದೆಡೆ ಪೋಷಕರು ಮಕ್ಕಳನ್ನು ಶಾಲೆ ಅಥವಾ ಕಾಲೇಜಿಗೆ ಕಳುಹಿಸಲು ಹಿಂದೇಟು ಹಾಕುವ ಪರಿಸ್ಥಿತಿ ಸೃಷ್ಟಿಯಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಎಂ.ವಿ.ಲಕ್ಷ್ಮೀ ನರಸಿಂಹಪ್ಪ ಮಾತನಾಡಿ ‘ಪ್ರಕರಣದ ಆರೋಪಿಗಳ ವಿರುದ್ಧ ಕಟ್ಟುನಿಟ್ಟನ ಕ್ರಮ ಜರುಗಿಸಬೇಕು. ಜತೆಗೆ ಪ್ರಕರಣ ಸಂಬoಧ ನ್ಯಾಯಾಂಗ ತನಿಖೆ ನಡೆಸಬೇಕು. ಹೆಣ್ಣು ಮಕ್ಕಳಿಗೆ ಹೆಚ್ಚಿನ ಪೊಲೀಸ್ ರಕ್ಷಣೆ ನೀಡಬೇಕು.ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕರಾದ ಪೈಪಾಳ್ಯ ರವಿ , ಸಂಘಟನಾ ಸಂಚಾಲಕರುಗಳಾದ ಎಲ್.ಎನ್.ನರಸಿಂಹಯ್ಯ, ಎಂ.ವಿ.ಲಕ್ಷ್ಮಿ ನರಸಿಂಹಪ್ಪ, ಹೆಚ್.ಎನ್.ಗೋಪಿ, ಎನ್.ಕೋಟಪ್ಪ, ಡಿ.ಕೆ.ರಮೇಶ್, ಜಯಂತ್ ,ತಾಲ್ಲೂಕು ಖಜಾಂಚಿ ಎಂ.ವಿ.ನರಸಿAಹಪ್ಪ, ಜೀವಿಕ ಸಂಘಟನೆಯ ತಾಲ್ಲೂಕು ಸಂಚಾಲಕರಾದ ಅಂಜಿನಪ್ಪ, ಸಹ ಸಂಚಾಲಕ ಹೊಸಹುಡ್ಯ ಚೌಡಯ್ಯ, ದ.ಸಂ.ಸ. ತಾಲ್ಲೂಕು ಸಮಿತಿ ಸದಸ್ಯರಾದ ಬೋಡಿಕದಿರೇಪಲ್ಲಿ ನಂಜುAಡಪ್ಪ, ಪಿ.ನಾಗಪ್ಪ, ಪಾತಪಾಳ್ಯ ನರಸಿಂಹಮೂರ್ತಿ, ಸೂರಿ, ವೈ. ನಾರಾಯಣಸ್ವಾಮಿ, ಶ್ರೀನಿವಾಸ, ಗಂಗರಾಜು, ವಿಜಿಯ ಕುಮಾರ್, ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ವರದಿ : ರಾ.ನ.ಗೋಪಾಲ ರೆಡ್ಡಿ, ಬಾಗೇಪಲ್ಲಿ

error: