April 25, 2024

Bhavana Tv

Its Your Channel

ಮಹಿಳೆಯರ ಮೇಲೆ ದೌರ್ಜನ್ಯ ನಿಲ್ಲಬೇಕು:- ಯೋಜನಾಧಿಕಾರಿ ಪಿ. ಜಿ.ಗಿರೀಶ್

ವರದಿ : ರಾ.ನ.ಗೋಪಾಲ ರೆಡ್ಡಿ, ಬಾಗೇಪಲ್ಲಿ.

ಬಾಗೇಪಲ್ಲಿ:-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ದೇವರಗುಡಿಪಲ್ಲಿಯಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ “ಮಹಿಳೆಯರ ರಕ್ಷಣೆ ನಮ್ಮೆಲ್ಲರ ಹೊಣೆ” ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ತಾಲ್ಲೂಕು ಯೋಜನಾಧಿಕಾರಿ ಪಿ. ಜಿ.ಗಿರೀಶ್ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ ಸಮಾಜದಲ್ಲಿ ಎಲ್ಲಿ ಮಹಿಳೆಯರನ್ನು ಪೂಜಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸುತ್ತಾರೆ ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ವಾಸ್ತವದಲ್ಲಿ ಭಾರತದ ಮಹಿಳೆಯರು ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದ್ದಾರೆ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತದೆ. ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಿಲ್ಲಬೇಕು. ಹೆಣ್ಣನ್ನು ನೋಡುವ ದೃಷ್ಟಿ ಬದಲಾವಣೆಯಾಗಬೇಕು. ಎಲ್ಲರೂ ಜಾಗೃತಿಯಾಗಬೇಕು. ತಾರತಮ್ಯ ಹೋಗಲಾಡಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಹೊಸದಾಗಿ ಯೋಜನೆಯನ್ನು ಜಾರಿಗೆ ತಂದಿದ್ದ ಸಾಮಾನ್ಯ ಸೇವಾ ಕೇಂದ್ರ ಬಾಗೇಪಲ್ಲಿ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಒಂದು ಕೇಂದ್ರ ಸ್ಥಾಪಿಸಿ ತದನಂತರ ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಸುಮಾರು ೧೫ ಸಾಮಾನ್ಯ ಸೇವಾ ಕೇಂದ್ರಗಳು ಸ್ಥಾಪಿಸುತ್ತಿದ್ದು ಇದರ ಎಲ್ಲಾ ಸದಸ್ಯರು ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದರು.

ಎ.ಎಸ್. ಐ ನಾರಾಯಣ ಸ್ವಾಮಿ ಮಾತನಾಡಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಯಾವುದೇ ದೌರ್ಜನ್ಯ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವುದರ ಜೊತೆಗೆ ಅವರಿಗೆ ಸ್ವಯಂ ರಕ್ಷಣೆ ಕುರಿತು ಮಾರ್ಗದರ್ಶನ ನೀಡಬೇಕು ಹಾಗೂ ಕಠಿಣ ಕಾನೂನು ಜಾರಿಗೊಳಿಸುವುದರ ಜೊತೆಗೆ ಸಮಾಜದ ಮನಸ್ಥಿತಿಯಲ್ಲಿ ಬದಲಾವಣೆ ತರುವ ತುರ್ತು ಅಗತ್ಯವೂ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷೆ ಸರಸ್ವತಮ್ಮ, ದೇವರಗುಡಿಪಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷ ಪವನ್ ಕಲ್ಯಾಣ್, ಶಿಕ್ಷಕಿ ರಮಾದೇವಿ,ಅಂಗನವಾಡಿ ಕಾರ್ಯಕರ್ತೆ ಗಂಗರತ್ನಮ್ಮ,ಜ್ಞಾನ ವಿಕಾಸ್ ಸಮನ್ವಯ ಅಧಿಕಾರಿ ಕೆ.ಆರ್. ಮಂಜುಳಾ, ವಲಯದ ಮೇಲ್ವಿಚಾರಕ ವಿಠಲ್. ಕೆ,ಹಾಗೂ ಸೇವಾ ಪ್ರತಿನಿಧಿಗಳಾದ ಗಂಗುಲಪ್ಪ,ಮAಜುಳಾ, ಲಕ್ಷ್ಮೀ, ಇನ್ನೂ ಮುಂತಾದವರು ಪ್ರಮುಖರು ಇದ್ದರು.

error: