April 16, 2024

Bhavana Tv

Its Your Channel

ಹುಟ್ಟಿದ ಹಬ್ಬದಂದು ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಮಾಜ ಸೇವೆಗೆ ಮುಂದಾಗಿ:-ಕೆ.ಎನ್.ಹರೀಶ್

ಬಾಗೇಪಲ್ಲಿ: ಕರ್ನಾಟಕ ರಕ್ಷಣಾ ವೇದಿಕೆಯ ಬಾಗೇಪಲ್ಲಿ ತಾಲ್ಲೂಕು ಘಟಕ ಅಧ್ಯಕ್ಷ ಕೆ.ಎನ್.ಹರೀಶ್ ರವರ ೩೭ ಜನ್ಮ ದಿನಾಚರಣೆಯ ಪ್ರಯುಕ್ತ ಸತತವಾಗಿ ೬ ನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ತಾಲ್ಲೂಕು ಘಟಕ ಕರವೇ ಕಾರ್ಯಕರ್ತರು ಹಾಗೂ ಚಿಕ್ಕಬಳ್ಳಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ .ಎನ್.ಹರೀಶ್ ಮಾತನಾಡಿ ಸಮಾಜದಲ್ಲಿ ಶ್ರೀಮಂತರು ತಮ್ಮ ಹುಟ್ಟಿದ ಹಬ್ಬಕ್ಕೆ ಪಾರ್ಟಿ ಸಭೆ ಸಮಾರಂಭಗಳಲ್ಲಿ ದುಂದು ವೆಚ್ಚ ಮಾಡುವುದಕ್ಕಿಂತ ಸಮಾಜ ಸೇವೆಗೆ ಮುಂದಾಗಬೇಕು ಎಂದು ಹೇಳಿದರು. ಅದ್ದರಿಂದ ನನ್ನ ಹುಟ್ಟು ಹಬ್ಬವನ್ನು ಸರಳವಾಗಿ ಆಚರಣೆ ಮಾಡಿ ನನ್ನ ಹುಟ್ಟಿದ ಹಬ್ಬಕ್ಕೆ ವರ್ಷಗಳಿಂದ ರಕ್ತದಾನ ಮಾಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಕ್ತ ದಾನಿಗಳಿಂದ ಸುಮಾರು ೩೪ ಯುನಿಟ್ ರಕ್ತವನ್ನು ರೆಡ್ ಕ್ರಾಸ್ ಸಂಸ್ಥೆ ಚಿಕ್ಕಬಳ್ಳಾಪುರ ಜಿಲ್ಲೆಯ ಘಟಕಕ್ಕೆ ಬಾಗೇಪಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸತ್ಯನಾರಾಯಣ ರೆಡ್ಡಿಯವರಿಂದ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಅಧ್ಯಕ್ಷ ಎಂ.ಆರ್.ಲೋಕೇಶ್, ತಾಲ್ಲೂಕು ಅಧ್ಯಕ್ಷ ಕೆ.ಎನ್.ಹರೀಶ್, ಮಹಿಳಾ ಜಿಲ್ಲಾ ಅಧ್ಯಕ್ಷೆ ಸುಜಾತಮ್ಮ, ಜಿಲ್ಲಾ ಉಪಾಧ್ಯಕ್ಷ ಶಬೀರ್, ರಸ್ತೆ ಬದಿಯ ವ್ಯಾಪಾರಸ್ಥ ಘಟಕ ಅದ್ಯಕ್ಷ ನಾರಾಯಣ ಸ್ವಾಮಿ ಚಿಕ್ಕಬಳ್ಳಾಪುರ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ರವಿಕುಮಾರ್, ನರಸಿಂಹ ಮೂರ್ತಿ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: