April 26, 2024

Bhavana Tv

Its Your Channel

ಬಾಗೇಪಲ್ಲಿ: ಭಾರತ್ ಬಂದ್ ಸಂಪೂರ್ಣ ಯಶಸ್ವಿ : ಜನಜೀವನ ಅಸ್ತವ್ಯಸ್ತ

ಬಾಗೇಪಲ್ಲಿ:- ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ೩ ಪ್ರಮುಖ ಕೃಷಿ ಕಾಯ್ದೆ ಹಿಂಪಡೆಯುವAತೆ ಒತ್ತಾಯಿಸಿ ರೈತ ಸಂಘಟನೆಗಳು “ಭಾರತ ಬಂದ್”ಗೆ ಕರೆ ಕೊಟ್ಟಿದ್ದರಿಂದ ತಾಲ್ಲೂಕಿನಾದ್ಯಂತ ಮಂಗಳವಾರ ವಾಣಿಜ್ಯ ವಹಿವಾಟು ಹಾಗೂ ಬಸ್ ಸೇವೆ ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತವಾಯಿತು.

ಬಂದ್ ಹಿನ್ನೆಲೆಯಲ್ಲಿ ಇಡೀ ದಿನ ಅಂಗಡಿಗಳು ಮುಚ್ಚಿದ್ದವು. ಖಾಸಗಿ ಬಸ್‌ಗಳು ರಸ್ತೆಗೆ ಇಳಿಯಲೇ ಇಲ್ಲ. ಸರಕು ಸಾಗಣೆ ವಾಹನ ಸೇವೆಯಲ್ಲಿ ವ್ಯತ್ಯಯವಾಗಿ ಜನಜೀವನಕ್ಕೆ ತೊಂದರೆಯಾಯಿತು. ಬೆಳಿಗ್ಗೆ ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ವಿವಿಧ ಸಂಘಟನೆ ಸದಸ್ಯರು ತಡೆದರು.

ಬ್ಯಾಂಕ್, ಅಂಚೆ ಕಚೇರಿ, ಬಿಎಸ್‌ಎನ್‌ಎಲ್ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಕೆಲ ಹೊತ್ತು ಕಾರ್ಯ ಚಟುವಟಿಕೆ ನಡೆದವು. ಬಳಿಕ ವಿವಿಧ ಸಂಘಟನೆಗಳ ಸದಸ್ಯರು ಖಾಸಗಿ ಕಂಪನಿ ಹಾಗೂ ಸರ್ಕಾರಿ ಕಚೇರಿಗಳನ್ನು ಬಲವಂತವಾಗಿ ಮುಚ್ಚಿಸಿದರು. ಅಲ್ಲದೇ, ಆಟೊಗಳನ್ನು ತಡೆದು ಬಂದ್ ಬೆಂಬಲಿಸುವAತೆ ಒತ್ತಾಯಿಸುತ್ತಿದ್ದ ದೃಶ್ಯ ಹಲವೆಡೆ ಕಂಡುಬAತು.

ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿ ಕಡಿಮೆ ಇತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಎಟಿಎಂ ಕೇಂದ್ರಗಳನ್ನು ಮುಚ್ಚಲಾಗಿತ್ತು. ಇದರಿಂದ ಗ್ರಾಹಕರು ತೊಂದರೆ ಅನುಭವಿಸಿದರು. ಆಸ್ಪತ್ರೆಗಳು, ಔಷಧ ಮಾರಾಟ ಮಳಿಗೆಗಳು ಎಂದಿನAತೆ ಸೇವೆ ಒದಗಿಸಿದವು. ಪೆಟ್ರೋಲ್ ಬಂಕ್‌ಗಳಲ್ಲಿ ವಹಿವಾಟು ಸಹಜವಾಗಿತ್ತು.

ರಸ್ತೆ ತಡೆ, ಬೈಕ್ ರ್ಯಾಲಿ ಮೆರವಣಿಗೆ ನಡೆಸಿದ ವಿವಿಧ ಸಂಘಟನೆಗಳ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ,ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸದಾ ಜನಜಂಗುಳಿ ಮತ್ತು ವಾಹನ ದಟ್ಟಣೆಯಿಂದ ಗಿಜಿಗುಡುತ್ತಿದ್ದ ಬಸ್ ನಿಲ್ದಾಣ ಬಿಕೋ ಎನ್ನುತ್ತಿದ್ದವು. ರಸ್ತೆಗಳಲ್ಲಿ ಜನರ ಓಡಾಟ ಮತ್ತು ವಾಹನ ಸಂಚಾರ ವಿರಳವಾಗಿತ್ತು.

ವರ್ತಕರು, ಹೋಟೆಲ್ ಮಾಲೀಕರ ಸಂಘ, ಹಸಿರು ಸೇನೆ ಕರ್ನಾಟಕ ರಾಜ್ಯ ರೈತ ಸಂಘ, ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು, ಜೀವಿಕ ಸಂಘಟನೆ, ಪಿ.ಎಸ್.ಎಸ್, ಎಸ್ ಎಫ್. ಐ ಹಾಗೂ ಡಿವೈಎಫ್ ಐ, ಸಿಪಿಎಂ, ಕರ್ನಾಟಕ ಪ್ರಾಂತ ರೈತ ಸಂಘ, ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ, ಕರವೇ ಸ್ವಾಭಿಮಾನ ಬಣ, ಸರಕು ಸಾಗಣೆ ವಾಹನ ಮಾಲೀಕರು ಮತ್ತು ಚಾಲಕರ ಒಕ್ಕೂಟ , ಮರಗೆಲಸರಾರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಬಂದ್‌ಗೆ ಬೆಂಬಲ ಸೂಚಿಸಿದರು.

ಸರ್ಕಾರಿ ಕಚೇರಿಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ, ಪ್ರಮುಖ ವೃತ್ತ, ರಸ್ತೆಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಜತೆಗೆ ಪೊಲೀಸ್ ಗಸ್ತು ಹೆಚ್ಚಿಸಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ನಿಯಮಿತವಾಗಿ ಗಸ್ತು ನಡೆಸಿದರು

ಈ ಸಂದರ್ಭದಲ್ಲಿ ಮಂಜುನಾಥ ರೆಡ್ಡಿ, ಚನ್ನರಾಯಪ್ಪ, ಲಕ್ಷ್ಮಣ್ ರೆಡ್ಡಿ, ಸಿ.ಉಮಾ,ಆಂಜನೇಯ ರೆಡ್ಡಿ ಮುಸ್ತಫಾ, ಸಾವಿತ್ರಮ್ಮ, ಪಿ.ಎಂ.ಮುನಿವೆAಕಟಪ್ಪ, ರಘುರಾಮ ರೆಡ್ಡಿ, ಬಿಟಿಸಿ ಶ್ರೀನಿವಾಸ್, ಜೆ ಡಿ ಎಸ್ ಮುಖಂಡರಾದ ಮಹಮ್ಮದ್ ನೂರುಲ್ಲಾ, ಸೂರ್ಯನಾರಾಯಣ, ದೇವಿಕುಂಟೆ ಶ್ರೀನಿವಾಸ್, ಎಂ.ಎಸ್. ನರಸಿಂಹರೆಡ್ಡಿ, ಶ್ರೀರಾಮಪ್ಪ ಶ್ರೀರಾಮ ನಾಯಕ್ ಹೇಮಚಂದ್ರ, ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: