April 29, 2024

Bhavana Tv

Its Your Channel

ನವಜೀವನ ವ್ಯಸನಮುಕ್ತ ಸಾಧಕರಿಗೆ ಸನ್ಮಾನ

ಬಾಗೇಪಲ್ಲಿ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬಾಗೇಪಲ್ಲಿ ತಾಲ್ಲೂಕು ಶಾಖೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮತೀ ನವಜೀವನ ವ್ಯಸನಮುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಾಗೇಪಲ್ಲಿ ಪಟ್ಟಣದ ಗೀತಾ ಮಂದಿರದಲ್ಲಿ ನಡೆಯಿತು.

ಬಾಗೇಪಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಪಿ. ಜಿ.ಗಿರೀಶ್ ಪ್ರಾಸ್ತಾವಿಕ ವಾಗಿ ಮಾತನಾಡಿ ಆಡು ಮುಟ್ಟದ ಸೊಪ್ಪಿಲ್ಲ, ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವಾ ಕ್ಷೇತ್ರವಿಲ್ಲ ಎಂದು ಹೇಳಿದ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಮೂಲಕ ನವಜೀವನ ಸಮಿತಿ ಆಶ್ರಯದಲ್ಲಿ ಹೆಗ್ಗಡೆಯವರು ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳು ಹಾಗೂ ವ್ಯಸನ ಮುಕ್ತ ಆರೋಗ್ಯ ಪೂರ್ಣ ಸಮಾಜರೂಪಿಸುವ ಕಾರ್ಯ ಸ್ತುತ್ಯಾರ್ಹವಾಗಿದೆ. ಕಿರು ಆರ್ಥಿಕ ಯೋಜನೆ ಮೂಲಕ ಸ್ವ-ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಮಹಿಳೆಯರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.ಶೇಕಡಾ ನೂರು ಸಾಲ ಮರು ಪಾವತಿಯಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಾಗೇಪಲ್ಲಿ ತಾಲ್ಲೂಕು ಹಿರಿಯ ವಕೀಲರಾದ ಎ.ಜಿ.ಸುಧಾಕರ್ ಮಾತನಾಡಿ ಮಹಿಳೆಯರು ದುಶ್ಚಟಗಳ ದಮನ ಮಾಡುವ ಸಂಕಲ್ಪ ಶಕ್ತಿ ಮತ್ತುಆತ್ಮ ಬಲ ಹೊಂದಿರಬೇಕು. ಜನಜಾಗೃತಿ ವೇದಿಕೆಯ ನಿರಂತರ ಪರಿಶ್ರಮ-ಪ್ರಯತ್ನದಿಂದ ವ್ಯಸನ ಮುಕ್ತರಾಗಿ ಅನೇಕ ಕುಟುಂಬಗಳು ಇಂದು ಚೇತರಿಸಿ ನವಜೀವನ ನಡೆಸುತ್ತಿವೆಎಂದು ಹೇಳಿದರು.

ಬಾಗೇಪಲ್ಲಿ ತಾಲ್ಲೂಕು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ
ಜನಜಾಗೃತಿ ವೇದಿಕೆಯ ವತಿಯಿಂದ ನವಜೀವನ ಸದಸ್ಯರಿಗೆ ಆತ್ಮೀಯವಾಗಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಧರ್ಮಸ್ಥಳ ಜಿಲ್ಲಾ ಯೋಜನಾಧಿಕಾರಿ ಜಿ.ಎಸ್. ಪ್ರಶಾಂತ್, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಎ.ನಂಜುoಡಪ್ಪ, ಚಿಕ್ಕಬಳ್ಳಾಪುರ ಯೋಜನಾಧಿಕಾರಿ ಜಿ.ಎಸ್.ಪ್ರಶಾಂತ್, ಬಿಳ್ಳೂರ ಆಂಜನೇಯ ಸ್ವಾಮಿ ಟ್ರಸ್ಟ್ ಅದ್ಯಕ್ಷ ನಾಗರಾಜು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಮೇಲ್ವಿಚಾರಕಿ ಶ್ರೀಮತಿ ಸಾರಮ್ಮ ಕೃಷಿ ಅಭಿವೃದ್ಧಿ ಅಧಿಕಾರಿ ಧನಂಜಯ ಮಂಜುಳಾ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: