April 20, 2024

Bhavana Tv

Its Your Channel

ಬಾಗೇಪಲ್ಲಿ ತಾಲೂಕಿನ ಲಖೀಂಪುರ್ ಖೇರಿ ಹಿಂಸಾಚಾರದ ವಿರುದ್ಧ ‘ ಪಿ.ಎಸ್. ಎಸ್ ಹಾಗೂ ರಾಜ್ಯ ಹಸಿರು ಸೇನೆ ತಾಲ್ಲೂಕು ಘಟಕ ವತಿಯಿಂದ ಪ್ರತಿಭಟನೆ

ಬಾಗೇಪಲ್ಲಿ:- ಈಗಾಗಲೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು ಲಖೀಂಪುರ್ ಖೇರಿ ಹಿಂಸಾಚಾರದ ವಿರುದ್ಧ ‘ ಪಿ.ಎಸ್. ಎಸ್ ಹಾಗೂ ರಾಜ್ಯ ಹಸಿರು ಸೇನೆ ಬಾಗೇಪಲ್ಲಿ ತಾಲ್ಲೂಕು ಘಟಕ ವತಿಯಿಂದ ಗೂಳೂರು ವೃತ್ತ ದಿಂದ ಹೊರಟ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ತದನಂತರ ಪಿ.ಎಸ್. ಎಸ್. ಸಂಸ್ಥಾಪಕ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಪ್ರತಿಭಟನೆ ನೇತೃತ್ವ ವಹಿಸಿ ಕೃಷಿ ಕಾಯ್ದೆಯ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹತ್ಯೆ ಮಾಡಿದ್ದು ಅಮಾನವೀಯವಾಗಿದೆ. ಇಡಿ ದೇಶವೇ ತಲೆತಗ್ಗಿಸುವಂತಹ ಘಟನೆ ಇದಾಗಿದೆ. ವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ಉಂಟಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ ಎಂದು ಬಾಗೇಪಲ್ಲಿ ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಹೇಳಿದರು.
ಇದು ಕೇಂದ್ರ ಸರ್ಕಾರದ ನರೇಂದ್ರ ಮೋದಿ ಸರ್ಕಾರದ ಬಹಿರಂಗ ರೈತರನ್ನು ಹತ್ಯೆ ಮಾಡಿದೆ.ಭಾರತದ ಬೆನ್ನು ಎಲುಬು ಆದ ರೈತರನ್ನು ರಕ್ಷಣೆ ಮಾಡುವ ಸರ್ಕಾರ ಯಾವುದೇ ರೀತಿಯ ಮುಚ್ಚುಮರೆಯಿಲ್ಲದೆ ರೈತರನ್ನು ಬಹಿರಂಗ ಹತ್ಯೆಯನ್ನು ಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಿ.ಎಸ್.ಎಸ್. ಜಿಲ್ಲಾ ಸಂಚಾಲಕ ಚನ್ನರಾಯಪ್ಪ, ಹಸಿರು ಸೇನೆ ಬಾಗೇಪಲ್ಲಿ ತಾಲ್ಲೂಕು ಘಟಕ ಲಕ್ಷ್ಮಣ್ ರೆಡ್ಡಿ ಸಿ.ಉಮಾ,ಜುಬೇದ್ ಅಹ್ಮದ್,ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: