May 3, 2024

Bhavana Tv

Its Your Channel

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಬಾಗೇಪಲ್ಲಿ: ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಾಗೇಪಲ್ಲಿ ತಾಲ್ಲೂಕು ಘಟಕ ನಿರ್ಧರಿಸಿದ್ದು ಬಾಗೇಪಲ್ಲಿ ತಾಲ್ಲೂಕು ಬಿಇಓ ಎಸ್ ಸಿದ್ದಪ್ಪ ರವರಿಗೆ ಮನವಿ ಪತ್ರ ಸಲ್ಲಿಸಿದರು.
ಬಾಗೇಪಲ್ಲಿ ತಾಲ್ಲೂಕು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವಿ.ವೆಂಕಟರವಣ ಮಾತನಾಡಿ ಅ. ೪ರಿಂದ ತರಬೇತಿ ಬಹಿಷ್ಕಾರ ಮುಂದುವರಿಸಿರುವ ಪ್ರಾಥಮಿಕ ಶಾಲಾ ಶಿಕ್ಷಕರು,
ಇಂದಿನಿAದ ಅಂದರೆ ಅ. ೨೧ ರಿಂದ ೨೯ ರ ವರಿಗೆ ಕಪ್ಪು ಪಟ್ಟಿ ಧರಿಸಿ ಶೈಕ್ಷಣಿಕ ಚಟುವಟಿಕೆ ನಿರ್ವಹಿಸಲಿದ್ದಾರೆ. ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಅ. ೩೦ರಿಂದ ನ. ೧೦ರವರೆಗೆ ಮಧ್ಯಾಹ್ನದ ಬಿಸಿಯೂಟ ಮಾಹಿತಿ ಅಪ್‌ಡೇಟ್ ಮಾಡದಿರಲು, ೧೧ರಿಂದ ೧೮ರವರೆಗೆ ವಿದ್ಯಾರ್ಥಿಗಳ ಸಾಧನೆ ಟ್ರ‍್ಯಾಕಿಂಗ್ ವ್ಯವಸ್ಥೆ (ಎಸ್‌ಎಟಿಎಸ್) ಪೋರ್ಟಲ್‌ನಲ್ಲಿ ಮಾಹಿತಿ ಅಪ್‌ಡೇಟ್ ಮಾಡದಿರಲು ಸಂಘ ನಿರ್ಧರಿಸಿದೆ. ಆ ಬಳಿಕವೂ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ರಾಜ್ಯಮಟ್ಟದಲ್ಲಿ ರ‍್ಯಾಲಿ, ಧರಣಿ ಸತ್ಯಾಗ್ರಹ, ತರಗತಿ ಬಹಿಷ್ಕಾರ, ಶಾಲಾ ಬಹಿಷ್ಕಾರದಂಥ ಹೋರಾಟ ನಡೆಸಲು ಸಂಘ ಮುಂದಾಗಿದೆ.

ಮುಖ್ಯ ಶಿಕ್ಷಕರಿಗೆ ೧೫,೨೦, ೨೫ ವರ್ಷಗಳ ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಸಮಸ್ಯೆಯನ್ನೂ ಬಗೆಹರಿಸಬೇಕು ಎಂದೂ ಸಂಘ ಬೇಡಿಕೆ ಇಟ್ಟಿದೆ.
ಇದೇ ೨೧ರಂದು ತಾಲ್ಲೂಕುಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಹಾಗೂ ೨೫ರಂದು ಜಿಲ್ಲಾಮಟ್ಟದಲ್ಲಿ ಉಪ ನಿರ್ದೇಶಕರ ಮೂಲಕ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಗುವುದು. ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ

ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಪಾಧ್ಯಕ್ಷೆ ಪ್ರಭಾವತಿ, ಗೌರವಾದ್ಯಕ್ಷ ಆರ್.ಹನುಮಂತ ರೆಡ್ಡಿ ಉಪಾಧ್ಯಕ್ಷ ಆಂಜನೇಯಲು ಮಹಿಳಾ ಉಪಾಧ್ಯಕ್ಷೆ ವಿ.ಸುಮಾ ,ಪ್ರಧಾನ ಕಾರ್ಯದರ್ಶಿ ಸಿ.ವೆಂಕಟರಾಯಪ್ಪ, ,ಖಜಾಂಚಿ ಹೆಚ್.ಎಸ್. ವರಣ್,ಸಂಘಟನ ಕಾರ್ಯದರ್ಶಿ ಕದಿರಪ್ಪ,ರಂಗಾರೆಡ್ಡಿ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: