March 29, 2024

Bhavana Tv

Its Your Channel

ದೆಹಲಿ ರೈತ ಹೋರಾಟಕ್ಕಾಗಿ ಒಂದು ವರ್ಷ: ನ.೨೬ ರಂದು ರಾಷ್ಟ್ರೀಯ ಹೆದ್ದಾರಿ ಬಂದ್

ಬಾಗೇಪಲ್ಲಿ:- ನವದೆಹಲಿಯಲ್ಲಿ ಮೂರು ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಾಗೂ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ನವೆಂಬರ್ ೨೬ ಕ್ಕೆ ಒಂದು ವರ್ಷವಾಗುವ ಪ್ರಯುಕ್ತ ನ.೨೬ರಂದು ರಾಷ್ಟ್ರೀಯ ಹೆದ್ದಾರಿ ೭ ರ ಚದುಲಪುರ ಕ್ರಾಸ್‌ನಲ್ಲಿ ತಡೆ ಮಾಡಲಾಗುವುದು ಎಂದು ತಾಲ್ಲೂಕು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅದ್ಯಕ್ಷ ಲಕ್ಷ್ಮಣ್ ರೆಡ್ಡಿ ಹೇಳಿದರು.

ಅವರು ಬಾಗೇಪಲ್ಲಿ ಪಟ್ಟಣದ ಬಾಗೇಪಲ್ಲಿ ತಾಲ್ಲೂಕು ರೈತ ಸಂಘ ಕಛೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಪ್ರಧಾನಿ ಸೌಜನ್ಯಕ್ಕಾದರೂ ರೈತರ ಜತೆ ಮಾತುಕತೆ ನಡೆಸುವ ಕಾಳಜಿ ತೋರಿಸುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂಡವಾಳಶಾಹಿಗಳ ಪರವಾಗಿವೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಯ ವಿವಿಧ ಸಂಘಟನೆಗಳು ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿವೆ. ಅಂದು ಬೆಳಿಗ್ಗೆ ೧೦ರಿಂದ ಸಂಜೆ ೫ರವರೆಗೆ ಹೋರಾಟ ನಡೆಸುತ್ತೇವೆ. ಕೃಷಿಗೆ ಸಂಬAಧಿಸಿದ ಎಲ್ಲ ವಸ್ತುಗಳನ್ನು ಹೆದ್ದಾರಿಯಲ್ಲಿ ಇಡುತ್ತೇವೆ. ನಮ್ಮ ಈ ಹೋರಾಟ ದೊಡ್ಡ ಮಟ್ಟದಲ್ಲಿ ನಡೆಯುತ್ತದೆ ಎಂದು ಹೇಳಿದರು.

ರೈತ ಸಂಘ ಮಹಿಳಾ ಸಂಚಾಲಕಿ ಸಿ.ಉಮಾ ಮಾತನಾಡಿ, ನವದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ೬೦೦ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಚಳಿ, ಮಳೆ,ಬಿಸಿಲನ್ನು ಲೆಕ್ಕಿಸದೆ ಹೋರಾಟ ನಡೆಯುತ್ತಿದೆ. ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಪರವಾಗಿದೆ. ಆದಾನಿ ಸೇರಿದಂತೆ ಕಾರ್ಪೊರೇಟ್ ಕಂಪನಿಗಳ ಹಿತ ಕಾಪಾಡಲು ರೈತರ ಹಿತವನ್ನು ಬಲಿಕೊಡುತ್ತಿದೆ ಎಂದು ದೂರಿದರು.

ಚದುಲಪುರ ಕ್ರಾಸ್‌ನಲ್ಲಿ ಎಲ್ಲ ಸಂಘಟನೆಗಳು ಸೇರಿ ಹೋರಾಟ ನಡೆಸುತ್ತೇವೆ. ಹೆಚ್ಚು ಜನರು ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ, ರಘುನಾಥ್ ರೆಡ್ಡಿ ಜಿಲ್ಲಾ ಕಾರ್ಯದರ್ಶಿ ಎ.ವೆಂಕಟರಾಮಯ್ಯ, ರಮಣ ತಾಲ್ಲೂಕು ಉಪಾಧ್ಯಕ್ಷ, ಚೌಡರೆಡ್ಡಿ ತಾಲ್ಲೂಕು ಉಪಾಧ್ಯಕ್ಷ, ವೆಂಕಟರೆಡ್ಡಿ, ಚಾಂದ್ ಬಾಷಾ,ನರಸಿಂಹಾರೆಡ್ಡಿ,ಪಿ.ವೆAಕಟ ರೆಡ್ಡಿ, ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: