April 25, 2024

Bhavana Tv

Its Your Channel

ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು- ಡಾ. ಎ.ಹೆಚ್.ರಾಮರಾವ್

ಬಾಗೇಪಲ್ಲಿ: ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ನ್ಯಾಷನಲ್ ಎಜ್ಯುಕೇಷನ್ ಸಂಸ್ಥೆಯ ಅಧ್ಯಕ್ಷ ಡಾ. ಎ.ಹೆಚ್.ರಾಮರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಡಾ.ಎಚ್.ಎನ್. ರಂಗಮAದಿರದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 2022-23ನೇ ಸಾಲಿನ ಪ್ರಥಮ ಪಿಯು ತರಗತಿಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಏಕೈಕ ಉದ್ದೇಶದಿಂದ ಎಚ್.ನರಸಿಂಹಯ್ಯನವರು ಬಾಗೇಪಲ್ಲಿ, ಗೌರಿಬಿದನೂರು, ಹೂಸೂರು ಇತ್ಯಾದಿ ಗ್ರಾಮೀಣ ಭಾಗಗಳಲ್ಲಿ ಶಾಲಾ ಕಾಲೇಜುಗಳನ್ನು ಪ್ರಾರಂಭಿಸಿದರು.
ಅವರ ದೂರ ದೃಷ್ಠಿಯ ಫಲವಾಗಿ ಇಂದು ಎನ್.ಇ.ಎಸ್ ಸಂಸ್ಥೆಯಲ್ಲಿ ಸುಮಾರು 18 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸುವಲ್ಲಿ ನಮ್ಮ ಸಂಸ್ಥೆ ಮುಂಚೂಣಿಯಲ್ಲಿದೆ.
ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಬಹುತೇಕ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಉನ್ನತ ಸ್ಥಾನಮಾನಗಳನ್ನು ಗಳಿಸಿ ಕೀರ್ತಿ ತಂದಿದ್ದಾರೆ ಎಂದ ಅವರು ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಡಾ.ಎಚ್.ಎನ್ ರವರ ಕನಸು ನೆನಸು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಎನ್.ಇ.ಎಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್.ಎನ್.ನಾಗರಾಜರೆಡ್ಡಿ ಮಾತನಾಡಿ, ಕೇವಲ ಪಠ್ಯಕ್ಕೆ ಸೀಮಿತರಾಗದೆ ಕ್ರೀಡೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಪರಿಪೂರ್ಣ ವ್ಯಕ್ತಿತ್ವ ಹೊಂದಲು ಸಾಧ್ಯ ಎಂದರು.
ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಡಾ.ಎಚ್.ಎನ್ ರವರ ಕನಸು ಸಕಾರಗೊಳಿಸುವಲ್ಲಿ ಡಾ.ಎಚ್.ಎನ್.ರವರ ಗರಡಿಯಲ್ಲಿ ಪಳಗಿರುವ ಎ.ಹೆಚ್.ರಾಮರಾವ್ ರವರು ಸಂಸ್ಥೆಯ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.

ಪ್ರಥಮ ಪಿಯು ವಿದ್ಯಾರ್ಥಿಗಳನ್ನು ಕಾಲೇಜಿಗೆ ಬರಮಾಡಿಕೊಳ್ಳುವ ಸಂಪ್ರದಾಯ ಕಳೆದ ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಅದರಂತೆ 2022-23ನೇ ಸಾಲಿನಲ್ಲಿಯೂ ನಡೆಯುತ್ತಿದೆ ಎಂದ ಅವರು ಗ್ರಾಮೀಣ ಪ್ರದೇಶಗಳ ಉತ್ತಮ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ನಮ್ಮ ಸಂಸ್ಥೆ ಯಾವುದೇ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ 1 ಲಕ್ಷ, ಶೇ.85 ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ.ಗಳ ಬಹುಮಾನ ಘೋಷಣೆ ಮಾಡಿದರು.

ಬಾಗೇಪಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ವಿ.ವೆಂಕಟಶಿವಾರೆಡ್ಡಿ ಮಾತನಾಡಿದರು.

ಈ ಸಂದರ್ಭದಲ್ಲಿ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಟಿ.ವೀರಾಂಜನೇಯಲು, ಪದವಿ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ಹಾಗೂ ಆಡಳಿತ ಮಂಡಳಿ ಉಪಾಧ್ಯಕ್ಷ ಆರ್.ಎನ್.ವೆಂಕಟೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ಶೀರ್ಷಿಕೆ: ಬಾಗೇಪಲ್ಲಿ ನ್ಯಾಷನಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಥಮ ಪಿಯು ತರಗತಿಗಳ ಉದ್ಘಾಟನಾ ಸಮಾರಂಭವನ್ನು ಎನ್.ಇ.ಎಸ್ ಅಧ್ಯಕ್ಷ ಎ.ಹೆಚ್.ರಾಮರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಸ್.ಎನ್.ನಾಗರಾಜರೆಡ್ಡಿ ಇದ್ದರು.

ವರದಿ: ಗೋಪಾಲ ರೆಡ್ಡಿ

error: