May 30, 2023

Bhavana Tv

Its Your Channel

ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯಕ್ಕೆ ತೃತೀಯ

ಹೊನ್ನಾವರ: ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ಹೊನ್ನಾವರ ತಾಲೂಕಿನ ಸ.ಹಿ.ಪ್ರಾ.ಶಾಲೆ ಮಹಿಮೆ, ಇಲ್ಲಿಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕೆ. ಎಸ್. ಕೆರೆಮನೆ ಇವರು ಭರತ ನಾಟ್ಯ ಸ್ಪರ್ಧೆಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ. ಎ. ನಾಯ್ಕ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎನ್, ಎಸ್, ನಾಯ್ಕ, ಹಾಗೂ ಮುಖ್ಯಾಧ್ಯಾಪಕರಾದ ಉಲ್ಲಾಸ ಪಟಗಾರ ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

About Post Author

error: