September 14, 2024

Bhavana Tv

Its Your Channel

“ನವ ರಾಷ್ಟ್ರದ ಪ್ರೇರಕ ಶಕ್ತಿ ಶಿಕ್ಷಕರ ಸಾಧನೆಗೆ ಅನುಪಮ ಸೇವಾ ಪುರಸ್ಕಾರ ಪ್ರಶಸ್ತಿ ಪ್ರಧಾನ

ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ನೌಕರರ ಸಂಘದ ಬೆಂಗಳೂರು ರಾಜ್ಯ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಅನುಪಮಾ ಸೇವಾ ಪುರಸ್ಕಾರ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ .ಶಶಿಕಲಾ ಜೊಲ್ಲೆ, ಯವರು ಭಾಗವಹಿಸಿ,ಕಾರ್ಯಕ್ರಮ ಉದ್ಘಾಟಿಸಿದರು,.

ಅನುಪಮಾ ಸೇವಾ ಪುರಸ್ಕಾರ ಪ್ರದಾನ ಮಾಡಿ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ದೇಶದ ಭಾವಿ ಪ್ರಜೆಗಳನ್ನು ಉತ್ತಮವಾಗಿ ಸೃಷ್ಟಿ ಮಾಡುವ ಶಕ್ತಿ ಶಿಕ್ಷಕರಿಗಿದೆ. ಶಿಕ್ಷಕರು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಗಳಲ್ಲಿ ಮಕ್ಕಳನ್ನು ತೊಡಗಿಸುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿ, ರಾಷ್ಟ್ರದ ಪ್ರೇರಕ ಶಕ್ತಿ ಆಗುಬೇಕು ಎಂದು ಮಹಿಳಾ ದಿನಾಚರಣೆಯ ಶುಭಾಶಯ ಕೋರಿದರು.

ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತ ರಾಜ್ಯದ ೩೪ ಶೈಕ್ಷಣಿಕ ಜಿಲ್ಲೆಗಳ ೪೫ ಶಿಕ್ಷಕಕಿಯರಿಗೆ ಹಾಗೂ ಬೆಂಗಳೂರು ಉತ್ತರ ಜಿಲ್ಲೆಯ ೩೦ ಶಿಕ್ಷಕಿಯರಿಗೆ ಅನುಪಮ ಸೇವಾ ಪುರಸ್ಕಾರ ಪ್ರಶಸ್ತಿಯನ್ನು ವಿತರಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀಮತಿ ಕೆ.ಎಸ್.ಮುದಗಲ್, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು, ಹಿರಿಯೂರ ಕ್ಷೇತ್ರದ ಶಾಸಕರಾದ ಶ್ರೀಮತಿ ಪೂರ್ಣಿಮಾ, ಚಿತ್ರನಟಿ ಶ್ರೀಮತಿ ಸುಮನ್ ನಗರಕರ, ಬೆಂಗಳೂರು. ಉತ್ತರ ಉಪ ನಿರ್ದೇಶಕರಾದ ಶ್ರೀಸಿ.ಬಿ.ಜಯರಂಗ, ಎಐಪಿಟಿಎಫ್ ಉಪಾಧ್ಯಕ್ಷರಾದ ಶ್ರೀ ಬಸವರಾಜ ಗುರಿಕಾರ,ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕ ಸಂಘದ ಅಧ್ಯಕ್ಷರಾದ ವಿ.ಎಂ.ನಾರಾಯಣ ಸ್ವಾಮಿ ಹಾಗೂ ಹಿರಿಯ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.

error: