ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯ ಅಡಿಯಲ್ಲಿ ೬೦ ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಹಾಗೂ ಪುರುಷರಿಗೆ ದಂತಭಾಗ್ಯ ಯೋಜನೆಯ ಅಡಿಯಲ್ಲಿ ಉಚಿತವಾಗಿ ಹಲ್ಲಿನ ಸೆಟ್ ವಿತರಣೆ
ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಚೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾನವನ ದೇಹದಲ್ಲಿ ಪಚನಕ್ರಿಯೆಯು ಚೆನ್ನಾಗಿ ನಡೆಯಲು ಹಲ್ಲುಗಳು ಬಹಳ ಮುಖ್ಯವಾಗಿದ್ದು ತಾವು ಸೇವಿಸುವ ಆಹಾರವನ್ನು ಅಗಿದು ತಿನ್ನುವುದರಿಂದ ಪಚನಕ್ರಿಯೆಯು ಚೆನ್ನಾಗಿ ನಡೆದು ಆರೋಗ್ಯವು ವೃದ್ಧಿಯಾಗುತ್ತದೆ. ಆದ್ದರಿಂದ ಜನಸಾಮಾನ್ಯರು ಹಲ್ಲುಗಳ ಸಂರಕ್ಷಣೆಯ ಬಗ್ಗೆ ಕಾಳಜಿ ವಹಿಸಬೇಕು ಎಂದು ಡಾ.ಮಂಚೇಗೌಡ ಹೇಳಿದರು.
ಈ ಸಂದರ್ಭದಲ್ಲಿ ಕೃಷ್ಣರಾಜಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಜಯಪ್ರಕಾಶ್, ದಂತವೈದ್ಯರಾದ ಡಾ.ಪುಟ್ಟಸ್ವಾಮಿ, ಕಿಕ್ಕೇರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ.ಸುಪ್ರೀತ್, ಬೂಕನಕೆರೆ ಸಾರ್ವಜನಿಕ ಆಸ್ಪತ್ರೆಯ ಡಾ.ಅರುಣಾನಂದ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
ಎನ್.ಜಯರಾಂ, ಹಿರಿಯ ಆರೋಗ್ಯನಿರೀಕ್ಷಕ ಶೀಳನೆರೆ ಸತೀಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…
ಇದೇ ಸಂದರ್ಭದಲ್ಲಿ ದಂತಭಾಗ್ಯ ಯೋಜನೆಯ ಅಡಿಯಲ್ಲಿ ೧೦ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಉಚಿತ ಹಲ್ಲಿನ ಸೆಟ್‌ಗಳನ್ನು ವಿತರಿಸಲಾಯಿತು…
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.