December 22, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕಿನ ಪ್ರಸಿದ್ದ ಶ್ರೀ ಮರಡಿಲಿಂಗೇಶ್ವರ ಕ್ಷೇತ್ರದಲ್ಲಿ ದೊಡ್ಡಯ್ಯ ಚಿಕ್ಕಯ್ಯನವರ ಜೋಡಿ ರಥೋತ್ಸವ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ನಗರೂರು ಮಾರ್ಗೋನಹಳ್ಳಿ ಸಮೀಪದಲ್ಲಿರುವ ಶ್ರೀ ಮರಡಿಲಿಂಗೇಶ್ವರ ಕ್ಷೇತ್ರದಲ್ಲಿ ದೊಡ್ಡಯ್ಯ ಚಿಕ್ಕಯ್ಯನವರ ಜೋಡಿ ರಥೋತ್ಸವನ್ನ ಗಣ್ಯರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಹಾಲುಮತ ಕುರುಬ ಸಮೂದಾಯದ ಆರಾಧ್ಯದೈವವಾದ ಮರಡಿಲಿಂಗೇಶ್ವರ ಜಾತ್ರೆಗೆ ತಮ್ಮ ಸಾವಿರಾರು ಕುರಿಗಳೊಂದಿಗೆ ಆಗಮಿಸಿ ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಹಾಕಿಸಿ ಹರಕೆ ತೀರಿಸುವುದು ಈ ಹಿಂದಿನಿAದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ..ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾಧಿಗಳಿಗೆ ಮಜ್ಜಿಗೆ, ಪಾನಕ, ಕೋಸಂಬರಿ ಮೊಸರನ್ನ ಹಾಗೂ ಪುಳಿಯೊಗರೆ ಪ್ರಸಾದವನ್ನು ದೇವಾಲಯದ ವತಿಯಿಂದ ವಿತರಿಸಲಾಯಿತು. ಮರಡಿಲಿಂಗೇಶ್ವರ ದೇವಸ್ಥಾನದ ಸುತ್ತಲೂ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ದೊಡ್ಡಯ್ಯ, ಚಿಕ್ಕಯ್ಯನವರ ಜೋಡಿರಥಗಳು ಸ್ವಸ್ಥಾನಕ್ಕೆ ಮರಳಿದವು…
ಈ ಸಂದರ್ಭದಕಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ರವೀಂದ್ರಬಾಬು, ಎಪಿಎಂಸಿ ಮಾಜಿಅಧ್ಯಕ್ಷ ಕೆ.ಎನ್.ಕೃಷ್ಣ, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿರಮೇಶ್ ಮತ್ತು ಕಸಬಾ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಪುರುಷೋತ್ತಮ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಜೋಡಿ ರಥದ ಕಳಸಗಳಿಗೆ ಹಣ್ಣುಗಳನ್ನು ಸಮರ್ಪಿಸಿ ಕೃತಾರ್ಥರಾದರು…

error: