May 19, 2024

Bhavana Tv

Its Your Channel

ಎಸ್.ಡಿ.ಎಂ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ‘ಕೊರೋನಾ ವೈರಸ್’ ಜಾಗೃತಿ ಕಾರ್ಯಕ್ರಮ

ನೋವೆಲ್ ಕೊರೋನಾ ವೈರಸ್ ಎಂಬುವುದು ಕೊರೋನಾ ವೈರಸ್‌ನ ಹೊಸ ಪ್ರಬೇಧವಾಗಿದ್ದು, ಮನುಷ್ಯರಲ್ಲಿ ಮತ್ತು ಪ್ರಾಣಿಗಳಲ್ಲಿ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಈ ರೋಗಕ್ಕೆ ಯಾವುದೇ ನಿಖರವಾದ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ಲಕ್ಷಣ ಆಧಾರಿತ ಚಿಕಿತ್ಸೆ ಮೂಲಕ ಸೋಂಕು ಗುಣಪಡಿಸಬಹುದಾದರೂ ಸೂಕ್ತ ಮುಂಜಾಗ್ರತೆ ವಹಿಸುವುದು ಸೂಕ್ತ ಎಂದು ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ.ಉಷಾ ಹಾಸ್ಯಗಾರ ಅಭಿಪ್ರಾಯಪಟ್ಟರು.
ಅವರು ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ ಮತ್ತು ತಾಲೂಕಾ ಆಸ್ಪತ್ರೆ ಹೊನ್ನಾವರದ ಮಾಹಿತಿ ಸಂಪರ್ಕ ವಿಭಾಗ ಇವುಗಳ ಸಹಯೋಗದಲ್ಲಿ ನಡೆದ ‘ಕೊರೋನಾ ವೈರಸ್’ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೊರೋನಾ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಆದ್ದರಿಂದ ಕೆಮ್ಮುವಾಗ, ಸೀನುವಾಗ ಕರವಸ್ತç ಬಳಸಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದು. ವ್ಯಯಕ್ತಿಕ ಮತ್ತು ಸಾಮೂಹಿಕ ನೈರ್ಮಲ್ಯ ಕಾಪಾಡಬೇಕು. ಅನಾರೋಗ್ಯದ ಲಕ್ಷಣವಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು. ಬೇಯಿಸದ ಮೊಟ್ಟೆ, ಮಾಂಸ ಸೇವನೆ ಮಾಡಬಾರದು. ಬಾಯಿಯನ್ನು ಒಣಗಲು ಬಿಡದೇ ಸುರಕ್ಷಿತ ನೀರನ್ನು ಕುಡಿಯಬೇಕು. ಲಕ್ಷಣಗಳು ಕಂಡುಬAದ ತಕ್ಷಣ ಹತ್ತಿರದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು ಎಂದರು. ಪ್ರಾಚಾರ್ಯರಾದ ಡಾ.ವಿಜಯಲಕ್ಮಿö್ಮÃ ಎಂ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷರಾದ ಡಾ.ಎಂ.ಆರ್.ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಆನಂದ ಶೇಟ್ ಉಪಸ್ಥಿತರಿದ್ದರು. ಪ್ರೊ ಪ್ರಶಾಂತ ಹೆಗಡೆ ಮೂಡಲಮನೆ ನಿರೂಪಿಸಿ, ವಂದಿಸಿದರು.

error: