July 11, 2024

Bhavana Tv

Its Your Channel

ನಾಳೆ ಹೊನ್ನಾವರದಲ್ಲಿ ಅನಂತಕುಮಾರ ಹೆಗಡೆ ವಿರುಧ್ಧ ಪ್ರತಿಭಟನೆ

ಹೊನ್ನಾವರ : ಉತ್ತರ ಕನ್ನಡದ ಸಂಸದ ಶ್ರೀ ಅನಂತಕುಮಾರ ಹೆಗಡೆಯವರು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ತಮ್ಮ ಭಾಷಣದಲ್ಲಿ ದೇಶದ ಸ್ವಾತಂತ್ರö್ಯ ಹೋರಾಟಗಾರರ ಕುರಿತಂತೆ ಆಡಿದ ಅವಮಾನಕಾರಿ ಮಾತುಗಳನ್ನು ಖಂಡಿಸಿ ಅವರ ವಿರುಧ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸುವ ಉದ್ದೇಶದಿಂದ ಮಂಕಿ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೇಸ್‌ನಿAದ ಪ್ರತಿಭಟನೆ ನಡೆಸಲಾಗುವುದು.
ಕಾರಣ ಗುರುವಾರ ದಿ. ೬ ರ ಬೆಳಿಗ್ಗೆ ೧೧ ಗಂಟೆಗೆ ಹೊನ್ನಾವರ ಪಟ್ಟಣ ಪಂಚಾಯತ್ ಆವರಣದಲ್ಲಿರುವ ಮಹಾತ್ಮಾ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಆನಂತರ ತಹಶೀಲ್ದಾರ ಮುಖಾಂತರ ರಾಜ್ಯಪಾಲರಿಗೆ ಪ್ರತಿಭಟನಾ ಮನವಿ ಸಲ್ಲಿಸಲಾಗುವುದು. ಪಕ್ಷದ ಎಲ್ಲ ಘಟಕಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ತೆಂಗೇರಿ ಮತ್ತು ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗೋವಿಂದ ನಾಯ್ಕ ಜಂಟಿ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

error: