September 18, 2024

Bhavana Tv

Its Your Channel

ಕೆಪಿಸಿಸಿಗೆ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ..

ಬೆಂಗಳೂರು : ಕೆಪಿಸಿಸಿಗೆ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಕರ್ನಾಟಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಕೊನೆಗೂ ಡಿಕೆ ಶಿವಕುಮಾರ್ ಅವರು ನೇಮಕಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಹುದ್ದೆಗೆ ರಾಜ್ಯದಲ್ಲಿ ತೀವ್ರ ಪೈಪೊಟಿ ಏರ್ಪಟ್ಟಿತ್ತು. ಹೆಚ್ ಕೆ ಪಾಟೀಲ್, ಜಿ.ಪರಮೇಶ್ವರ್ ಸೇರಿದಂತೆ ಅನೇಕರ ನಡುವೆ ಪೈಪೋಟಿ ಉಂಟಾಗಿದೆ ಎನ್ನಲಾಗುತ್ತಿತ್ತು. ಆದ್ರೇ ಕೊನೆಗೂ ಈ ಹುದ್ದೆಯ ಮುಂಜೂಣಿಯಲ್ಲಿದ್ದಂತ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಎಐಸಿಸಿಯ ಜನರಲ್ ಸೆಕ್ರೇಟರಿ ಕೆಸಿ ವೇಣುಗೋಪಾಲ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿಕೆ ಶಿವಕುಮಾರ್ ಅವರನ್ನು, ಕಾರ್ಯಾಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

error: