April 18, 2024

Bhavana Tv

Its Your Channel

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಪೋಷಣೆ ಅಭಿಯಾನ ಕಾರ್ಯಕ್ರಮ

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಪೋಷಣೆ ಅಭಿಯಾನ ಕಾರ್ಯಕ್ರಮ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಐವರು ಗ್ರಾಮೀಣ ಮಹಿಳೆಯರ ಸೀಮಂತ ಕಾರ್ಯಕ್ರಮ ನಡೆಸಿ ಸನ್ಮಾನಿಸಿ ಗೌರವಿಸಲಾಯಿತು.

ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀಸ್ವಾಮಿನಾಯಕ ಗ್ರಾಮೀಣ ಪ್ರದೇಶದ ಗರ್ಭಿಣಿ ಮಹಿಳೆಯರ ಸೀಮಂತ ಕಾರ್ಯಕ್ರಮ ನಡೆಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉದ್ಯೋಗಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕಿ ಮೇನಕಾದೇವಿ ಮಾತನಾಡಿ ಹೆಣ್ಣು ಮಕ್ಕಳು ಪೌಷ್ಠಿಕಾಂಶದ ಆಹಾರವನ್ನು ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಹಾಲು, ಮೊಟ್ಟೆ, ಸೊಪ್ಪು ತರಕಾರಿ ಹಾಗೂ ಹಣ್ಣು ಹಂಫಲುಗಳನ್ನು ನಿಯಮಿತವಾಗಿ ಸೇವಿಸಿ ಆರೋಗ್ಯವನ್ನು ಕಾಪಾಡಿಕೊಂಡು ಮಗುವಿನ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್, ಸಿಡಿಪಿಓ ದೇವಕುಮಾರ್, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಡಾ.ಕೆ.ಆರ್.ನೀಲಕಂಠ ಎಸಿಡಿಪಿಓ ಪದ್ಮಾ, ಆಸರೆ ಸಮಾಜಸೇವಾ ಟ್ರಸ್ಟಿನ ಅಧ್ಯಕ್ಷ ಹೆಚ್.ಬಿ.ಮಂಜುನಾಥ್, ಹಿರಿಯ ಆರೋಗ್ಯ ಪರಿವೀಕ್ಷಕ ಶೀಳನೆರೆ ಸತೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿ ಸೀಮಂತ ಶಾಸ್ತ್ರ ಮಾಡಿಸಿಕೊಂಡ ಗ್ರಾಮೀಣ ಮಹಿಳೆಯರನ್ನು ಅಭಿನಂದಿಸಿ ಶುಭ ಹಾರೈಸಿದರು.

error: