April 27, 2024

Bhavana Tv

Its Your Channel

ಆಹಾರ ಕಿಟ್-ಟೂಲ್ ಕಿಟ್-ಸೇಪ್ಟಿ ಕಿಟ್ ದುಬಾರಿ ಕಾರು- ಟಿವಿ-ಕಂಪ್ಯೂಟರ್ ಖರೀದಿಯಲ್ಲಿ ನಡೆದಿರುವ ಭಾರಿ ಅವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಒತ್ತಾಯಿಸಿ ಪ್ರತಿಭಟನೆ

ಮಳವಳ್ಳಿ ; ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿoದ ವಲಸೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ಹಂಚಲು ಶಾಸಕರಿಗೆ ನೀಡಿರುವ ಕ್ರಮ ಸರಿಯಾದ್ದುದ್ದಲ್ಲ ಹಾಗೂ ಆಹಾರ ಕಿಟ್-ಟೂಲ್ ಕಿಟ್-ಸೇಪ್ಟಿ ಕಿಟ್ ದುಬಾರಿ ಕಾರು- ಟಿವಿ-ಕಂಪ್ಯೂಟರ್ ಖರೀದಿಯಲ್ಲಿ ನಡೆದಿರುವ ಭಾರಿ ಅವ್ಯವಹಾರ ವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಮಳವಳ್ಳಿ ತಾಲ್ಲೂಕು ಸಮಿತಿ ಪಟ್ಟಣದಲ್ಲಿ ಇಂದು ಪ್ರತಿಭಟನೆ ನಡೆಸಿತು.
ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ಕಾರ್ಮಿಕರು ದಾರಿಯುದ್ದಕ್ಕೂ ಸರ್ಕಾರ, ಕಾರ್ಮಿಕ ಇಲಾಖೆ ಸಚಿವರ ವಿರುದ್ದ ಘೋಷಣೆ ಗಳನ್ನು ಕೂಗಿದರು.
ನಂತರ ಇಲ್ಲಿನ ಕಾರ್ಮಿಕ ಇಲಾಖೆಯ ನಿರೀಕ್ಷಕರ ಕಚೇರಿ ತಲುಪಿ ಅಲ್ಲಿ ಕೆಲಕಾಲ ಪ್ರತಿಭಟನಾ ಪ್ರದರ್ಶನ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಹೆಚ್ ಕೆ ಹೆಚ್ ಕೆ ತಿಮ್ಮೇಗೌಡ ಅವರು ರಾಜ್ಯದ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿರುವ ಸೆಸ್ ಹಣ ಸಂಪೂರ್ಣವಾಗಿ ಕಾರ್ಮಿಕರ ಕಲ್ಯಾಣಕ್ಕೆ ವಿನಿಯೋಗಿಸ ಬೇಕು. ವಲಸೆ ಹಾಗೂ ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಹಣ ಮತ್ತು ವಿಪತ್ತು ನಿರ್ವಹಣಾ ನಿಧಿಯಿಂದ ಹಂಚಿಕೆ ಮಾಡಬೇಕೆಂದು ನಿರ್ದೇಶನ ನೀಡಿದೆ. ಆದರೆ ಕಾರ್ಮಿಕ ಸಚಿವರು ಕಲ್ಯಾಣ ಮಂಡಳಿಯ ಹಣದಲ್ಲಿ ಆಹಾರ ಕಿಟ್ ಗಳನ್ನು ಖರೀದಿಸಿರುವುದು ಮತ್ತು ಬೆಂಗಳೂರಿನಲ್ಲಿ ನೋಂದಾಯಿತ ಕಾರ್ಮಿಕರಿಗೆ ಕಾರ್ಮಿಕ ಸಂಘಗಳ ಮೂಲಕ ನೆಪ ಮಾತ್ರಕ್ಕೆ ಹಂಚಿಕೆ ಮಾಡಿ ರಾಜ್ಯಾದ್ಯಂತ ಮಂಡಳಿಗೆ ಸಂಬAಧವೇ ಇರದ ಶಾಸಕರ ಮೂಲಕ ಹಂಚಿಕೆ ಮಾಡಿರು ವುದು ಕಾರ್ಮಿಕ ಕಾಯ್ದೆಯ ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.
ಅಲ್ಲದೆ ಲಕ್ಷಾಂತರ ರೇಷನ್ ಕಿಟ್ ಗಳನ್ನು ಸಗಟು ಮಾರುಕಟ್ಟೆ ದರಗಳಿಗಿಂತ ದುಪ್ಪಟ್ಟು ಬೆಲೆಗೆ ಆರು ಖಾಸಗಿ ಕಂಪನಿಗಳಿಗೆ ಟೆಂಡರ್ ನೀಡಿರುವುದರ ಹಿಂದೆ ಭ್ರಷ್ಟಚಾರ ಮತ್ತು ಸ್ವಜನಪಕ್ಷಪಾತ ಎದ್ದು ಕಾಣುತ್ತಿದೆ. ಇದರಿಂದ ಕಲ್ಯಾಣ ಮಂಡಳಿಗೆ ಹತ್ತಾರು ಕೋಟಿ ನಷ್ಟ ಆಗಿರುವ ಸಾಧ್ಯತೆ ಇದೆ.
ಕಾರ್ಮಿಕ ಸಂಘಟನೆಗಳು ಮಾಡಿರುವ ಈ ಆರೋಪಗಳಿಗೆ ಕಾರ್ಮಿಕ ಸಚಿವರು ನೀಡಿರುವ ಉತ್ತರವು ಸಮರ್ಪಕವಾಗಿಲ್ಲ. ಕೇವಲ ಆಹಾರ ಕಿಟ್ ಗಳ ಗುಣ ಮಟ್ಟಕ್ಕೆ ಮಾತ್ರಕ್ಕೆ ತನಿಖೆಯನ್ನು ಸೀಮೀತ ಗೊಳಿಸಿ ಉಳಿದಂತೆ ಖರೀದಿ ವ್ಯವಹಾರ, ಶಾಸಕರಿಗೆ ಕಿಟ್ ವಿತರಣೆ, ಷರತ್ತಿನಂತೆ ೧೦ ಕೆಜಿ ಅಕ್ಕಿ ಬದಲು ಐದು ಕೆಜಿ ನೀಡಿರುವುದು ಸೇರಿ ಇತರೆ ಆರೋಪಗಳಿಗೆ ಉತ್ತರಿಸಿಲ್ಲ.
ಎಂದು ಆರೋಪಗಳ ಪಟ್ಟಿ ಮಾಡಿದರು.
*ಅಲ್ಲದೆ ಲಕ್ಷಾಂತರ ಕಾರ್ಮಿಕರಿಗೆ ಇನ್ನೂ ಕೋವಿಡ್ ಪರಿಹಾರದ ಹಣ ಜಮೆಯಾಗಿಲ್ಲ ಹೀಗಿದ್ದೂ ಕಲ್ಯಾಣ ಮಂಡಳಿಯ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಜಾಹೀರಾತುಗಳ ಮೂಲಕ ಕಾರ್ಮಿಕರನ್ನು ದಿಕ್ಕುತಪ್ಪಿಸುವ ಯತ್ನ ನಡೆದಿದೆ
ಈ ಹಿನ್ನಲೆಯಲ್ಲಿ ಇಡೀ ಆಹಾರ ಕಿಟ್ ಗಳ ಖರೀದಿ ವ್ಯವಹಾರವನ್ನೇ ತನಿಖೆಗೊಳಪಡಿಸುವ ಅಗತ್ಯವಿದೆ.

ಅಲ್ಲದೆ ಮಂಡಳಿಯ ಅಧ್ಯಕ್ಷರೂ ಆಗಿರುವ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕಲ್ಯಾಣ ಮಂಡಳಿಯ ಸಭೆಯನ್ನು ಕರೆಯದೇ ಏಕಪಕ್ಷೀಯವಾಗಿ ಎಲ್ಲ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ನಡೆದಿರುವ ಎಲ್ಲಾ ತೀರ್ಮಾನಗಳ ಹಾಗೂ *ಆಹಾರ ಕಿಟ್- ಟೂಲ್ ಕಿಟ್-ಸೇಪ್ಟಿ ಕಿಟ್-ದುಬಾರಿ ಕಾರು-ಟಿವಿ-ಕಂಪ್ಯೂಟರ್ ಖರೀದಿಯಲ್ಲಿ ನಡೆದಿರುವ ಭಾರಿ ಅವ್ಯವಹಾರವನ್ನು ನ್ಯಾಯಾಂಗ ತನಿಖೆ ಒಳಪಡಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಉ.ರಾಮಕೃಷ್ಣ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರು ಹಾಗೂ ಮಳವಳ್ಳಿ ಪುರಸಭಾ ಸದಸ್ಯರಾರ ಕುಮಾರ್. ಪಿ ಖಜಾಂಚಿ ಬಿ. ಮಂಟೇಸ್ವಾಮಿ ಉಪಾಧ್ಯಕ್ಷರಾದ ಶಿವಮ್ಮ. ಮಂಜು. ಸಹ ಕಾರ್ಯದರ್ಶಿ ಪುಟ್ಟಸ್ವಾಮಿ ಚಂದ್ರ ಶೇಖರ್ ಜನವಾದಿ ಮಹಿಳಾ ಸಂಘಟನೆಯ ಸುನೀತಾ ಕೆಪಿಆರ್‌ಎಸ್À ಗುರುಸ್ವಾಮಿ ಡಿವೈಎಫ್‌ಐ ಶಿವಕುಮಾರ್ ಭಾಗವಹಿಸಿದರು.

ವರದಿ: ಮಲ್ಲಿಕಾರ್ಜುನ ಮಳವಳ್ಳಿ

error: