December 22, 2024

Bhavana Tv

Its Your Channel

ಕ.ವಿ.ವಿ. ರ‍್ಯಾಂಕ್ ವಿಜೇತ ಪ್ರತಿಭಾನ್ವಿತ ವಿದ್ಯಾರ್ಥಿನಿ ಕುಮಾರಿ ಸಂಗೀತಾ ಲಕ್ಷö್ಮಣ ನಾಯ್ಕ,

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ೨೦೧೮-೧೯ ನೇ ಶೈಕ್ಷಣಿಕ ಸಾಲಿನ ಕಲಾ ವಿಭಾಗದ ರ‍್ಯಾಂಕ್ ಘೋಷಣೆಯಗಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಮಹಾವಿದ್ಯಾಲಯ ಹೊನ್ನಾವರದ ಬಿ.ಎ. ಅಂತಿಮ ವರ್ಷದಲ್ಲಿ ತೇರ್ಗಡೆಯಾದ ಕುಮಾರಿ ಸಂಗೀತಾ ಲಕ್ಷö್ಮಣ ನಾಯ್ಕ, ಒಂಬತ್ತನೇ ರ‍್ಯಾಂಕ್ ಪಡೆದು ಕಾಲೇಜಿಗೆ ಹಾಗೂ ಹೊನ್ನಾವರಕ್ಕೆ ಕೀರ್ತಿ ತಂದಿರುತ್ತಾರೆ.
ಸಧ್ಯ ಈಕೆಯು ಧಾರವಾಡದಲ್ಲಿ ಎಂ.ಎ. ಮ್ಯೂಸಿಕ್ ಉನ್ನತ ಶಿಕ್ಷಣ ಪಡೆಯುತ್ತಿದ್ದಾಳೆ. ಸಂಗಿತ ಕ್ಷೇತ್ರದಲ್ಲಿ ಈಗಾಗಲೇ ವಿಶ್ವವಿದ್ಯಾಲಯ ಯುವಜನೋತ್ಸವದಲ್ಲಿ ಎರಡು ಬಾರಿ ಪ್ರಥಮ ಸ್ಥಾನ ಪಡೆದು ಅಂತರ್ ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆಯಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುತ್ತಾರೆ. ಹಾಗೂ ರಾಜ್ಯ ಮಟ್ಟದ ಸಂಗೀತ ಸ್ಪರ್ಧೆಗಳಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. ೨೦೧೯ ನೇ ಸಾಲಿನಲ್ಲಿ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ, ಮೈಸೂರು ಇವರು ಗಂಗೂಬಾಯಿ ಹಾನಗಲ್ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಶಾಸ್ತಿçÃಯ ಸಂಗೀತ, ಭಾವಗೀತೆ ಹಾಗೂ ಭಕ್ತಿಗೀತೆ ಈ ಮೂರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಕಾಲೇಜಿನ ಅಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಶಿಕ್ಷಕ ವೃಂದದವರು ಇವರನ್ನು ಹಾರ್ದಿಕವಾಗಿ ಅಭಿನಂದಿಸಿರುತ್ತಾರೆ.

error: