September 18, 2024

Bhavana Tv

Its Your Channel

ಕೃಷ್ಣರಾಜಪೇಟೆ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಂದ ಕೋರೋನಾ ಬಗ್ಗೆ ಜಾಗೃತಿ ಕಾರ್ಯಕ್ರಮ ಸಾರ್ವಜನಿಕರಿಗೆ ಭಯ ಬೇಡ ಜಾಗೃತಿ ಇರಲಿ ಎಂದು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮದ ಕುರಿತು ಮಾಹಿತಿ

ಕೃಷ್ಣರಾಜಪೇಟೆ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ತಾಲ್ಲೂಕು ಆಡಳಿತದ ವತಿಯಿಂದ ಕೊರೋನಾ ತಡೆ ಕುರಿತು ಜನ ಜಾಗೃತಿ ಮೂಡಿಸಲಾಯಿತು … ತಹಶೀಲ್ದಾರ್ ಎಂ.ಶಿವಮೂರ್ತಿ ಅವರು ಕೊರೋನಾ ತಡೆಕುರಿತು ಆರೋಗ್ಯ ಜಾಗೃತಿ ಕುರಿತು ಮಾತನಾಡಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕನ್ನು ಧರಿಸಬೇಕು ಇಲ್ಲವೇ ಕರವಸ್ತ್ರವನ್ನು ಬಾಯಿಗೆ ಅಡ್ಡಲಾಗಿ ಹಿಡಿದುಕೊಂಡು ಕೆಮ್ಮುವುದು ಹಾಗೂ ಸೀನುವುದನ್ನು ಮಾಡಬೇಕು. ಮುಂಜಾಗ್ರತ ಕ್ರಮಗಳೇ ರೋಗ ಹರಡುವಿಕೆಗೆ ಮುದ್ದಾಗಿರುವುದರಿಂದ ವೈದ್ಯರು ಸೂಚಿಸುವ ಆರೋಗ್ಯ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು..ಇಂದು ಮಾನ್ಯ ಪ್ರಧಾನಮಂತ್ರಿ ನರೇಂದ್ರಮೋಧಿ ಅವರು ಕರೆ ನೀಡಿರುವ ಜನತಾ ಕರ್ಪ್ಯೂವನ್ನು ಕಡ್ಡಾಯವಾಗಿ ಯಶಸ್ವಿಗೊಳಿಸಬೇಕು..ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವು ಯಾವುದೂ ಇಲ್ಲವೆಂಬ ಸತ್ಯವನ್ನು ಅರಿಯಬೇಕು ಎಂದು ಕಿವಿಮಾತು ಹೇಳಿದರು…
ತಾಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿ ವಿಶ್ವವನ್ನೇ ಕಾಡುತ್ತಾ
ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಕೊರೋನಾ ವೈರಸ್ ನಿಯಂತ್ರಣ ಹಾಗೂ ನಿಗ್ರಹಕ್ಕೆ ತಾಲೂಕು ಆಡಳಿತದೊಂದಿಗೆ ಸಹಕರಿಸಿ ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು ಎಂದು ಮನವಿ ಮಾಡಿದರು….

ಈ ಸಂಧರ್ಭದಲ್ಲಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ದೇವಕುಮಾರ್, ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್, ತಾಲೂಕು ಆರೋಗ್ಯಶಿಕ್ಷಣಾಧಿಕಾರಿ ಶಿವಮ್ಮ, ಹಿರಿಯ ಆರೋಗ್ಯ ನಿರೀಕ್ಷಕರಾದ ಶೀಳನೆರೆ ಸತೀಶ್, ಧರ್ಮೇಂದ್ರ, ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾಧಿಕಾರಿ ಗಂಗಾಧರ ಸೇರಿದಂತೆ ನೂರಾರು ಸಾರ್ವಜನಿಕರು ಕೊರೋನಾ ತಡೆ ಕುರಿತ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು….

error: