September 18, 2024

Bhavana Tv

Its Your Channel

ಕೃಷ್ಣರಾಜಪೇಟೆ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ನಲ್ಲಿ ಕೈತೊಳೆಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಪರೀಕ್ಷೆ ಎದುರಿಸಲು ಕಳಿಸಿಕೊಡಲಾಯಿತು

ಸ್ಯಾನಿಟೈಸರ್ ನಲ್ಲಿ ಕೈತೊಳೆಯುವ ಅಭಿಯಾನಕ್ಕೆ ತಹಶೀಲ್ದಾರ್ ಎಂ.ಶಿವಮೂರ್ತಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯ ಚಾಲನೆ ನೀಡಿದರು…
ಕೊರೋನಾ ತಡೆಗೆ ಸಾರ್ವಜನಿಕರು ಹಾಗೂ ಯುವಜನರ ಸಹಕಾರವು ಅತ್ಯಗತ್ಯವಾಗಿ ಬೇಕಾಗಿದೆ. ಮಾಸ್ಕ್ ಗಳನ್ನು ಧರಿಸಿ, ಸ್ಯಾನಿಟೈಸರ್ ಬಳಸಿ ಕೈತೊಳೆಯುವ ಮೂಲಕ ಕೊರೋನಾ ವೈರಾಣು ಹರಡುವುದನ್ನು ತಡೆದು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಮತ್ತು ಪ್ರಾಂಶುಪಾಲ ಡಿ.ಬಿ.ಸತ್ಯ ಮನವಿ ಮಾಡಿದರು….

error: