ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದೇ ೨೭ರಿಂದ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯನ್ನು ಮುಂದೂಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಕಷ್ಟಕರವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕರ್ನಾಟಕ ಸರ್ಕಾರ ಮುಂದೂಡಿದೆ. ಕೊರೊನಾ ಹರಡುವ ಭೀತಿ ಹಿನ್ನಲೆಯಲ್ಲಿ ಮಾರ್ಚ್ ೩೧ರ ತನಕ ೯ ಜಿಲ್ಲೆಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. “ಕೊರೊನಾ ಭೀತಿ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸದ್ಯದಲ್ಲೇ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುತ್ತದೆ” ಎಂದರು. ದ್ವಿತೀಯ ಪಿಯುಸಿ ಪರೀಕ್ಷೆಗಳು ರಾಜ್ಯದಲ್ಲಿ ನಡೆಯುತ್ತಿತ್ತು. ಅಂತಿಮ ವಿಷಯದ ಪರೀಕ್ಷೆ ಮಾತ್ರ ಮಾರ್ಚ್ ೨೩ರ ಸೋಮವಾರ ನಡೆಯಬೇಕಿತ್ತು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.