May 30, 2023

Bhavana Tv

Its Your Channel

ಅಕ್ರಮ ಮರಳು ಗಣಿಗಾರಿಕೆ ದಂಧೆಗೆ ಬ್ರೇಕ್ ಹಾಕಲು ಸಾರ್ವಜನಿಕರ ಆಗ್ರಹ….

ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಮರುವನಹಳ್ಳಿ ಗ್ರಾಮದ ಸ್ಮಶಾನಭೂಮಿಯ ಪಕ್ಕದಲ್ಲಿನ ಹಳ್ಳದಲ್ಲಿ ಎಗ್ಗಿಲ್ಲದೇ ನಡೆದಿರುವ ಅಕ್ರಮ ಮರಳು ಗಣಿಗಾರಿಕೆ ..

ರಾಯಸಮುದ್ರ ಹಳ್ಳವು ಹಾದುಹೋಗುವ ಮರುವನಹಳ್ಳಿ ಗ್ರಾಮದ ಸ್ಮಶಾನ ಜಾಗದ ಪಕ್ಕದಲ್ಲಿ ಮರಳು ಗಣಿಗಾರಿಕೆಯು ಎಗ್ಗಿಲ್ಲದೇ ನಡೆಯುತ್ತಿದೆ. ತಾಲೂಕು ಆಡಳಿತವು ಅಕ್ರಮ ಮರಳು ದಂಧೆಕೋರರ ಮೇಲೆ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಜರುಗಿಸಿ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು ಎಂದು ಮರುವನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…

ಹಳ್ಳದಲ್ಲಿ ಸಂಗ್ರಹವಾಗಿರುವ ಮರಳನ್ನು ಹಳ್ಳದ ಉದ್ದಕ್ಕೂ ಸಂಗ್ರಹಿಸಿ ಟ್ರಾಕ್ಟರ್ ಮತ್ತು ಟಿಪ್ಫರ್ ಗಳ ಮೂಲಕ ಕೃಷ್ಣರಾಜಪೇಟೆ ಪಟ್ಟಣಕ್ಕೆ ಸಾಗಿಸಲಾಗುತ್ತಿದೆ…

ಸ್ಮಶಾನ ಭೂಮಿಗೆ ಅಂತ್ಯಸಂಸ್ಕಾರಕ್ಕೆ ಬರುವ ಜನರನ್ನು ಹಳ್ಳದಲ್ಲಿನ ಭಾರೀ ಗುಂಡಿಗಳು ಪ್ರಾಣಕ್ಕೆ ಸಂಚಕಾರವನ್ನು ತಂದೊಡ್ಡುತ್ತಿವೆ…ಆದ್ದರಿಂದ ದಕ್ಷ ಆಡಳಿತಗಾರರಾದ ತಹಶೀಲ್ದಾರ್ ಎಂ.ಶಿವಮೂರ್ತಿ ಅವರು ಮರುವನಹಳ್ಳಿ ಸೇರಿದಂತೆ ರಾಯಸಮುದ್ರ ಹಳ್ಳದ ಉದ್ದಗಲಕ್ಕೂ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕಿ ಪ್ರಾಕೃತಿಕ ಸಂಪತ್ತನ್ನು ಸಂರಕ್ಷಣೆ ಮಾಡಬೇಕು. ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ರಾಜಕೀಯ ಪುಡಾರಿಗಳ ಬೆಂಬಲದಿಂದ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕು ಎಂದು ಮರುವನಹಳ್ಳಿ ಗ್ರಾಮದ ಸಾರ್ವಜನಿಕರು ಹಾಗೂ ರೈತ ಮುಖಂಡರು ಆಗ್ರಹಿಸಿದ್ದಾರೆ….

About Post Author

error: