April 24, 2024

Bhavana Tv

Its Your Channel

ಭಟ್ಕಳದಲ್ಲಿ ಮತ್ತೆ ಮೂವರಲ್ಲಿ ಕೋವಿಡ್- 19 ಸೋಂಕು ಇರುವುದು ದೃಢಪಟ್ಟಿದೆ.

ದುಬೈನಿಂದ ಬಂದಿದ್ದ 65 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಈ ವ್ಯಕ್ತಿಯ ಕುಟುಂಬದವರಿಗೆ ಸೋಂಕು ಇರುವುದು ದೃಢಪಟ್ಟಿದೆ.

ಈತನ 55 ವರ್ಷದ ಪತ್ನಿ , 22 ಹಾಗೂ 28 ವರ್ಷ ಪುತ್ರಿಯರಿಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟಾರೆ ಈಗ ಭಟ್ಕಳ ಮೂಲದ ಏಳು (6+1) ಜನರಲ್ಲಿ ಸೋಂಕು ಇರುವುದು ದೃಢಪಟ್ಟಂತಾಗಿದೆ.

ಸೋಂಕಿತ ಎಲ್ಲರನ್ನೂ ಕಾರವಾರದ ಪತಂಜಲಿ ನೌಕಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

error: