April 25, 2024

Bhavana Tv

Its Your Channel

ಕೊರೋನಾ ನಿಯಂತ್ರಣಕ್ಕಾಗಿ ಭಟ್ಕಳಕ್ಕೆ ಒಂದು ಕೋಟಿ ಬಿಡುಗಡೆ

ಕಾರವಾರ: ಹೆಲ್ತ್ ಎಮರ್ಜೆನ್ಸಿಯಲ್ಲಿರುವ ಭಟ್ಕಳ ತಾಲೂಕಿಗೆ ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ತುರ್ತು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಒಂದು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ.

2019- 20ನೇ ಸಾಲಿನಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾದ ಹಾನಿಗೆ ಪರಿಹಾರ ನೀಡಲು ಸರ್ಕಾರ 4.89 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು. ಜಿಲ್ಲಾಡಳಿತದ ಪ್ರಕೃತಿ ವಿಕೋಪ ಪರಿಹಾರ ನಿಧಿ ಖಾತೆಯಿಂದ ಕೊರೋನಾ ತಡೆಗೆ ಹಣವನ್ನು ಬಳಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿಸಿಗಳನ್ನು ನೀಡಿರುವುದರಿಂದ, ಭಟ್ಕಳ ಉಪವಿಭಾಗಾಧಿಕಾರಿ ಪಿಡಿ ಖಾತೆಗೆ ಒಂದು ಕೋಟಿ ಹಣವನ್ನು ಬಿಡುಗಡೆ ಮಾಡಿ ಆದೇಶಿಸಲಾಗಿದೆ.

ಹೆಲ್ತ್ ಎಮರ್ಜೆನ್ಸಿ ಇರುವ ಹಿನ್ನಲೆಯಲ್ಲಿ ಸೋಂಕು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವ ಅಧಿಕಾರವನ್ನು ಭಟ್ಕಳ ಉಪವಿಭಾಗಾಧಿಕಾರಿಗೆ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಒಂದು ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಕೊರೋನಾ ವೈರಸ್ ಸೋಂಕು ತಡೆಯಲು ಮಾತ್ರ ಹಣವನ್ನು ಬಳಸಿಕೊಳ್ಳಬೇಕು. ಬೇರೆ ಯಾವ ಉದ್ದೇಶಕ್ಕೂ ಬಳಸಿಕೊಳ್ಳಬಾರದು. ಒಂದೊಮ್ಮೆ ಬಳಸಿಕೊಂಡರೆ ಅದಕ್ಕೆ ಹೊಣೆ ಉಪವಿಭಾಗಾಧಿಕಾರಿಗಳೇ ಆಗಿರುತ್ತಾರೆಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ

error: