ಹೊನ್ನಾವರ ಎ. ೦೧ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಈಗಾಗಲೇ ಚಿಕಿತ್ಸೆಯಲ್ಲಿರುವ ಮತ್ತು ತನ್ನ ಹಳೆಯ ರೋಗಿಗಳ ಅನುಕೂಲಕ್ಕಾಗಿ ಟೆಲಿಮೆಡಿಸಿನ್ ಸೌಲಭ್ಯವನ್ನು ಪರಿಚಯಿಸುತ್ತಿದೆ. ಕಸ್ತೂರ್ಬಾ ಆಸ್ಪತ್ರೆಯ ಮಣಿಪಾಲವು ೨ನೇ ಎಪ್ರಿಲ್ ೨೦೨೦ ಗುರುವಾರದಿಂದ ಜಾರಿಗೆ ಬರುವಂತೆ ಈಗಾಗಲೇ ಚಿಕಿತ್ಸೆಯಲ್ಲಿರುವ ಮತ್ತು ತನ್ನ ಹಳೆಯ ರೋಗಿಗಳ ಅನುಕೂಲಕ್ಕಾಗಿ ಟೆಲಿಮೆಡಿಸಿನ್ ಮೂಲಕ ಸಮಾಲೋಚನೆಯನ್ನು ಪರಿಚಯಿಸುತ್ತಿದ್ದೇವೆ ಎಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಪ್ರಕಟಿಸಿದರು.
ಕೊರೊನಾ ವೈರಸ್ (ಕೋವಿಡ್೧೯) ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಹಲವು ನಿರ್ಬಂಧಗಳಿರುವುದರಿAದ ನಮ್ಮ ಹೆಚ್ಚಿನ ರೋಗಿಗಳು ವೈದ್ಯರೊಂದಿಗೆ ಸಮಯೋಚಿತ ಸಮಾಲೋಚನೆ ಮತ್ತು ಮರುಸಮಾಲೋಚನೆಯಿಂದ ವಂಚಿತರಾಗಿದ್ದಾರೆ. ಈ ಸಂಗತಿಯನ್ನು ಅರಿತುಕೊಂಡು ನಮ್ಮ ರೋಗಿಗಳಿಗೆ ಸಮಾಲೋಚನೆ ಮತ್ತು ಮರುಸಮಾಲೋಚನೆಯನ್ನು ನೀಡುವುದನ್ನು ಟೆಲಿಮೆಡಿಸಿನ್ ಸೇವೆಗಳ ಮೂಲಕ ಪರಿಚಯಿಸಲು ಕಸ್ತೂರ್ಬಾ ಆಸ್ಪತ್ರೆ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಸೇವೆಯಲ್ಲಿ ಜನರು ತಮ್ಮ ಮನೆಯಲ್ಲಿ ಕುಳಿತು ವೈದ್ಯರನ್ನು ಸಂಪರ್ಕಿಸಬಹುದು. ವೈದ್ಯರು ದೂರವಾಣಿ ಮೂಲಕ ಸಮಾಲೋಚನೆ ಮತ್ತು ವೈದ್ಯಕೀಯ ಸಲಹೆಯನ್ನು ನೀಡಲಿದ್ದಾರೆ. ಬೆಳಿಗ್ಗೆ ೯ರಿಂದ ಸಂಜೆ ೪ರವರೆಗೆ ದೂರವಾಣಿ ಕರೆ ಮಾಡುವುದರ ಮೂಲಕ ಎಲ್ಲಾ ವಿಭಾಗದ ವೈದ್ಯರನ್ನು ಸಂಪರ್ಕಿಸಬಹುದು. ಸಂಪರ್ಕಿಸಲು ೦೮೦೪೭೧೯೨೨೩೫ ಗೆ ಕರೆಮಾಡಬೇಕಾಗಿ ವಿನಂತಿ. ಜ್ವರದ ಚಿಕಿತ್ಸಾಲಯ ಮತ್ತು ತುರ್ತು ಚಿಕಿತ್ಸೆ ಸೇವೆಗಳು ಎಂದಿನAತೆ ಕಾರ್ಯನಿರ್ವಹಿಸಲಿದೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.