April 26, 2024

Bhavana Tv

Its Your Channel

ದೇಶದಲ್ಲಿ ತಲ್ಲಣ ಮೂಡಿಸಿರುವ ಕೊರೋನಾ ಸೋಂಕು ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೊಂದು ಪ್ರಕರಣ.

ಕರೋನಾ ಕಡಿವಾಣಕ್ಕೆ ಬರುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಭಟ್ಕಳದಲ್ಲಿ ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ೨೬ ವರ್ಷದ ಐದು ತಿಂಗಳ ಗರ್ಭಿಣಿ ಮಹಿಳೆಗೆ ಸೋಂಕು ಇರುವುದು ದೃಢಪಟ್ಟಿದೆ. ಈಕೆಗೆ ಇಬ್ಬರು ಮಕ್ಕಳು ಇದ್ದು, ಈಕೆಯ ಪತಿ ದುಬೈನಿಂದ ವಾಪಸ್ಸಾದವನಾಗಿದ್ದಾನೆ. ಆದರೆ, ಪತಿಯ ಕೊರೋನಾ ವರದಿ ನೆಗೆಟಿವ್ ಬಂದಿದೆ.

ಮಾ.೩೧ರಂದು ಗರ್ಭಿಣಿ ಪತ್ನಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಆಕೆಯನ್ನು ಈತ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ. ಆಸ್ಪತ್ರೆಯ ಸಿಬ್ಬಂದಿ ಪತಿಯ ಕೈ ಮೇಲೆ ಕ್ವಾರಂಟೈನ್ ಮುದ್ರೆ ಇರುವುದನ್ನು ಗಮನಿಸಿ ವೈದ್ಯರ ಗಮನಕ್ಕೆ ತಂದಿದ್ದಾರೆ. ನಂತರ ಇಬ್ಬರನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಇಬ್ಬರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಈ ವೇಳೆ ಪತ್ನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಪತಿಯ ವರದಿ ನೆಗೆಟಿವ್ ಬಂದಿದೆ. ಇದೀಗ ಪತಿಯ ಗಂಟಲಿನ ದ್ರವವನ್ನು ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಲಾಗಿದೆ.

ದುಬೈನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಈಕೆಯ ಪತಿ, ಮಾರ್ಚ್ ೧೭ರಂದು ಮುಂಬೈಗೆ ವಿಮಾನದ ಮೂಲಕ ಬಂದಿಳಿದಿದ್ದ. ಮುಂಬೈನಲ್ಲಿ ಸುಮಾರು ನಾಲ್ಕು ದಿನ ಉಳಿದಿದ್ದ ಈತ, ಆನಂತರ ರೈಲಿನಲ್ಲಿ ಭಟ್ಕಳಕ್ಕೆ ಬಂದಿದ್ದ. ಭಟ್ಕಳ ರೈಲು ನಿಲ್ದಾಣದಿಂದ ಸ್ನೇಹಿತನ ಬೈಕ್ ನಲ್ಲಿ ಮನೆಗೆ ತೆರಳಿದ್ದ. ದುಬೈನಿಂದ ಬಂದವನಾಗಿದ್ದರಿAದ ಆರೋಗ್ಯ ಇಲಾಖೆ ಸಿಬ್ಬಂದಿ ಈತನ ಕೈಗೆ ಹೋಂ ಕ್ವಾರಂಟೈನ್ ಮುದ್ರೆ ಹಾಕಿದ್ದರು.

error: