May 23, 2024

Bhavana Tv

Its Your Channel

ಉ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಿವರಾಮ್ ಹೆಬ್ಬಾರ್

ಕಾರವಾರ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ರವರನ್ನ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆಲುವನ್ನ ಪಡೆದ ನಂತರ ಹಲವು ದಿನಗಳ ನಂತರ ಶಿವರಾಮ್ ಹೆಬ್ಬಾರ್ ರವರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಸದ್ಯ ಕೊರೋನಾ ಕಡಿವಾಣಕ್ಕೆ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದು ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಹೆಚ್ಚಿನ ಕೆಲಸ ಮಾಡೋ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನ ನೇಮಕ ಮಾಡಿ ಆದೇಶಿಸಿದ್ದು ಶಿವರಾಮ್ ಹೆಬ್ಬಾರ್ ರವರಿಗೆ ಜಿಲ್ಲೆಯ ಜವಬ್ದಾರಿ ನೀಡಲಾಗಿದೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಹಾಗೂ ಸಚಿವರಾದ ಪ್ರಭು ಚೌಹ್ಹಾನ್, ಮಾಧು ಸ್ವಾಮಿ ಮತ್ತು ಜಗದೀಶ್ ಶೆಟ್ಟರ್ ರವರಿಗೆ ಎರಡು ಜಿಲ್ಲೆಗಳ ಜವಬ್ದಾರಿ ನೀಡಲಾಗಿದ್ದು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಶಿಕಲಾ ಜೊಲ್ಲೆಯವರಿಗೆ ವಿಜಯಪುರ ಜಿಲ್ಲೆಯ ಜವಬ್ದಾರಿ ನೀಡಲಾಗಿದೆ.

error: