October 5, 2024

Bhavana Tv

Its Your Channel

ಕೊರೋನಾ ಸೋಂಕಿತ ನಾಲ್ವರು ಗುಣಮುಖ

ಕಾರವಾರ: ತಾಲೂಕಿನ ಪತಂಜಲಿ ನೌಕಾನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ವೈರಸ್ ಸೋಂಕಿತ ನಾಲ್ವರು ಗುಣಮುಖರಾಗಿದ್ದು ಇಂದು ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಭಟ್ಕಳ ಮೂಲದ ಎಂಟು ಜನರಲ್ಲಿ ಕೊರೋನಾ ಸೋಂಕು ದೃಢ ಪಟ್ಟ ತಕ್ಷಣ ಜಿಲ್ಲಾಡಳಿತ ಅವರನ್ನ ಭಟ್ಕಳ ತಾಲೂಕು ಆಸ್ಪತ್ರೆಯಿಂದ ಕಾರವಾರ ತಾಲೂಕಿನ ಕದಂಬ ನೌಕಾನೆಲೆಯ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ಮುಂದಾಗಿತ್ತು.

ಎಂಟು ಜನ ಸೋಂಕಿತರಲ್ಲಿ ಈಗಾಗಲೇ ಚಿಕಿತ್ಸೆ ಪಡೆದು ಇಬ್ಬರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು‌. ಇಂದು ಮತ್ತೆ ನಾಲ್ವರು ಗುಣಮುಖರಾಗಿ ಡಿಸ್ಚಾರ್ಜ್ ಆಗಲಿದ್ದಾರೆ.‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಳಿದ ಇಬ್ಬರು ಸಹ ಒಂದೆರಡು ದಿನದಲ್ಲಿ ಗುಣಮುಖರಾಗಿ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.

ಇತ್ತಿಚ್ಚಿಗೆ ಕೊರೋನಾ ಪತ್ತೆಯಾದ ಗರ್ಭಿಣಿ ಮಹಿಳೆಗೆ ಉಡುಪಿಯಲ್ಲಿ ಚಿಕಿತ್ಸೆ ಕೊಡುತ್ತಿರುವುದರಿಂದ ಜಿಲ್ಲೆಯಲ್ಲಿರುವ ಬಹುತೇಖ ಕೊರೋನಾ ‌ಸೋಂಕಿತರು ಗುಣಮುಖರಾಗಿದ್ದು ಜಿಲ್ಲೆಯ ಜನರು ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಗಿದೆ.

ವರದಿ : ಮಂಜು ಮುಟ್ಟಳ್ಳಿ

error: