
ಭಟ್ಕಳ: ಸೋಂಕಿತ ಗರ್ಭಿಣಿ ಮಹಿಳೆಯ ಪತಿಗೂ ಕೊರೋನಾ ಸೋಂಕು ಇರುವುದು ದೃಡಪಟ್ಟಿದೆ, ಒಂದು ತಿಂಗಳ ಹೋಮ್ ಕ್ವಾರಂಟೈನ್ ಆದ ಬಳಿಕ ಈತನಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಎಲ್ಲರಲ್ಲೂ ಆತಂಕಕ್ಕೆ ಕಾರಣವಾಗಿದೆ.
ಉತ್ತರ ಕನ್ನಡದಲ್ಲಿ ಸೊಂಕಿತರ ಸಂಖ್ಯೆ ೧೦ ಏರಿದಂತಾಗಿದೆ.
ದುಬೈನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಈತ, ಮಾರ್ಚ್ ೧೭ರಂದು ಮುಂಬೈಗೆ ವಿಮಾನದ ಮೂಲಕ ಬಂದಿಳಿದಿದ್ದ. ಮುಂಬೈನಲ್ಲಿ ಸುಮಾರು ನಾಲ್ಕು ದಿನ ಉಳಿದಿದ್ದ ಈತ, ಆನಂತರ ರೈಲಿನಲ್ಲಿ ಭಟ್ಕಳಕ್ಕೆ ಬಂದಿದ್ದ. ಭಟ್ಕಳ ರೈಲು ನಿಲ್ದಾಣದಿಂದ ಸ್ನೇಹಿತನ ಬೈಕ್ ನಲ್ಲಿ ಮನೆಗೆ ತೆರಳಿದ್ದ. ದುಬೈನಿಂದ ಬಂದವನಾಗಿದ್ದರಿAದ ಆರೋಗ್ಯ ಇಲಾಖೆ ಸಿಬ್ಬಂದಿ ಈತನ ಕೈಗೆ ಹೋಂ ಕ್ವಾರಂಟೈನ್ ಮುದ್ರೆ ಹಾಕಿದ್ದರು. ಮಾ.೩೧ರಂದು ಗರ್ಭಿಣಿ ಪತ್ನಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಆಕೆಯನ್ನು ಈತ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ.
ಆದರೆ, ಆಸ್ಪತ್ರೆಯ ಸಿಬ್ಬಂದಿ ಪತಿಯ ಕೈ ಮೇಲೆ ಕ್ವಾರಂಟೈನ್ ಮುದ್ರೆ ಇರುವುದನ್ನು ಗಮನಿಸಿ ವೈದ್ಯರ ಗಮನಕ್ಕೆ ತಂದಿದ್ದಾರೆ. ನಂತರ ಇಬ್ಬರನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಇಬ್ಬರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಈ ವೇಳೆ ಪತ್ನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಪತಿಯ ವರದಿ ನೆಗೆಟಿವ್ ಬಂದಿತ್ತು. ಆ ಬಳಿಕ ಪತಿಯ ಗಂಟಲಿನ ದ್ರವವನ್ನು ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಈತನ ವರದಿ ಪಾಸಿಟಿವ್ ಬಂದಿದೆ.
ಈತನ ಪತ್ನಿ, ಐದು ತಿಂಗಳ ಗರ್ಭಿಣಿಗೆ ಇತ್ತೀಚೆಗೆ ಸೋಂಕು ಇರುವುದು ದೃಢಪಟ್ಟಿದ್ದರಿಂದ ಮಣಿಪಾಲದ ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ