December 22, 2024

Bhavana Tv

Its Your Channel

ಭೂಗತ ಪಾತಕಿ ರವಿ ಪೂಜಾರಿ ಬಂಧನ ಪ್ರಕರಣ : ಸಿಸಿಬಿಯಿಂದ ಮುತ್ತಪ್ಪ ರೈ ವಿಚಾರಣೆ

ಬೆಂಗಳೂರು : ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಏತನ್ಮಧ್ಯೆ, ರವಿ ಪೂಜಾರಿಯ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ತಂಡ ಮುತ್ತಪ್ಪ ರೈ ಅವರನ್ನು ವಿಚಾರಣೆ ನಡೆಸಿದೆ.

ಮುತ್ತಪ್ಪ ರೈ ಅವರಿಗೆ ಅನಾರೋಗ್ಯದ ಕಾರಣ ಅವರ ನಿವಾಸಕ್ಕೆ ತೆರಳಿದ ಸಿಸಿಬಿ ತಂಡ ವಿಚಾರಣೆ ನಡೆಸಿದರು. ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದ ಅಧಿಕಾರಿಗಳ ತಂಡ ಮುತ್ತಪ್ಪ ರೈ ಅವರನ್ನು ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಮುತ್ತಪ್ಪ ರೈ ಆರೋಗ್ಯ ಕೆಲ ತಿಂಗಳಿಂದ ಹದಗೆಟ್ಟಿದೆ. ರವಿ ಪೂಜಾರಿ ವಿಚಾರಣೆ ವೇಳೆ ಆತನ ಅಪರಾಧಗಳಲ್ಲಿ ಮುತ್ತಪ್ಪ ರೈ ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ, ಹಲವು ಮಹತ್ವದ ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ ಎನ್ನಲಾಗಿದೆ.

ಬಂಧಿತ ರವಿ ಪೂಜಾರಿ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲೇ 50ಕ್ಕೂ ಹೆಚ್ಚು ಪ್ರಕರಣಗಳಿವೆ. ಅಂಡರ್ ವರ್ಲ್ಡ್ ಡಾನ್ ಗಳಾದ ದಾವೂದ್ ಇಬ್ರಾಹಿಂ, ಛೋಟಾ ರಾಜನ್, ಗ್ಯಾಂಗ್ ಗಳಲ್ಲಿ ಗುರುತಿಸಿಕೊಂಡಿದ್ದ ರವಿ ಪೂಜಾರಿ ವಿರುದ್ಧ ಮಹಾರಾಷ್ಟ್ರ, ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಬೆದರಿಕೆ, ಹಾಗೂ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣಗಳು ದಾಖಲಾಗಿವೆ….

source : kannadaNewsNow.com

error: