November 9, 2024

Bhavana Tv

Its Your Channel

ಫೆಬ್ರುವರಿ 13 ಕರ್ನಾಟಕ ಬಂದಿಗೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆ ಇಂದ ಸಂಪೂರ್ಣ ಬೆಂಬಲ

ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಶೇ.100 ರಷ್ಟು ಮೀಸಲಾತಿ ನೀಡಬೇಕು ಹಾಗೂ ಡಾ.ಸರೋಜಿನಿ ಮಹಿಷಿ ವರದಿಯನ್ನು ತಕ್ಷಣ ರಾಜ್ಯ ಸರ್ಕಾರ ಜಾರಿಗೊಳಿಸುಂತೆ ಒತ್ತಾಯಿಸಿ ಫೆ.13 ರಂದು ಕರ್ನಾಟಕ ಸಂಘಟನೆಗಳ ಒಕ್ಕೂಟ ಕರ್ನಾಟಕ ಬಂದ್‍ಗೆ ಕರೆ ನೀಡಿದೆ. ಒಕ್ಕೂಟದ ಬಂದ್‍ಗೆ ಕರ್ನಾಟಕ ವಿಶ್ವನಿರ್ಮಾಣ ಸೇನೆ ಬೆಂಬಲಿಸುತ್ತದೆ ಪತ್ರಿಕಾ ಪ್ರಕಟಣೆ ನೀಡಿರುವ ಕರ್ನಾಟಕ ವಿಶ್ವನಿರ್ಮಾಣ ಸೇನೆ ಗೊಳಸಂಗಿ ಗ್ರಾಮ ಘಟಕದ ಆರೋಗ್ಯ ಘಟಕ ಅಧ್ಯಕ್ಷರಾದಅಧ್ಯಕ್ಷರಾದ ತೌಸೀಪ ಗಣಿ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸುವುದಕ್ಕಾಗಿ ಅನಿವಾರ್ಯವಾಗಿ ಕರ್ನಾಟಕ ಬಂದ್ ಮಾಡಬೇಕಾದ ಪರಿಸ್ಥಿತಿ ಬಂದಿದೆ. ನಾವು ಕನ್ನಡಿಗರು ಸುಮ್ಮನೆ ಇದ್ದರೆ ನಮ್ಮ ರಾಜ್ಯದ ಯುವಕರು ಪರಭಾಷಿಗರ ಮುಂದೆ ಕೈ ಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ಬರುತ್ತದೆ ರಾಜ್ಯದಲ್ಲಿ ಲಕ್ಷಾಂತರ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ, ಬಿ.ಸಿ.ಡಿ ವರ್ಗದ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿರಿಸಬೇಕು ಕೇಂದ್ರ ಸರ್ಕಾರದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಶೇ 65 ರಷ್ಟು ಮೀಸಲಾತಿ ಕೊಡಬೇಕು ಎಂದು ಆಗ್ರಹಿಸುತ್ತದೆ ರಾಜ್ಯ ಸರ್ಕಾರದ ಉದ್ದಿಮೆಗಳಲ್ಲೂ ಎಲ್ಲ ಕನ್ನಡಿಗರಿಗೆ ಉದ್ಯೋಗ ಸೀಗಬೇಕು ಬಂದ ದಿನ ರಾಜ್ಯಾದ್ಯಂತ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಡಾ ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕೆಂದುಆಗ್ರಹಿಸಲಾಗುವುದು ಎಂದರು.

error: