July 14, 2024

Bhavana Tv

Its Your Channel

ಬಿ.ಜೆ.ಪಿ. ಪಕ್ಷದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಗೌರವ.

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಭಟ್ಕಳಕ್ಕೆ ಆಗಮಿಸಿದ್ದ ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಬಿ.ಜೆ.ಪಿ. ಪಕ್ಷದ ಭಟ್ಕಳದ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು ತಾವು ಹಿಂದೆ ಡಾ. ಚಿತ್ತರಂಜನ್ ಅವರಿಂದ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದನ್ನು ಸ್ಮರಿಸಿದರು. ಪಕ್ಷ ಸಂಘಟನೆಗಾಗಿ ಪ್ರತಿಯೋರ್ವರು ಕೆಲಸ ಮಾಡಬೇಕೆಂದು ಕರೆ ನೀಡಿದ ಅವರು ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಹೊಸದರಲ್ಲಿಯೇ ಲಾಕ್‌ಡೌನ್ ಆಗಿದ್ದು ಅಭಿವೃದ್ಧಿ ಕಡೆಗೆ ಗಮನ ನೀಡಲು ಸಾಧ್ಯವಾಗಿಲ್ಲ. ಆದರೆ ಜಿಲ್ಲೆಯನ್ನು ಕೋವಿಡ್-೧೯ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರ ಶ್ರಮ ಅಗತ್ಯವಾಗಿದೆ. ಅತ್ಯಂತ ಉತ್ತಮವಾಗಿ ಎಲ್ಲರೂ ಕೆಲಸ ಮಾಡಿದ್ದು ಇನ್ನು ಮುಂದೆಯೂ ಕೂಡಾ ಉತ್ತಮ ಸಹಕಾರ ನೀಡುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಸುನಿಲ್ ನಾಯ್ಕ, ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಉಪಾಧ್ಯಕ್ಷ ಗೋವಿಂದ ನಾಯ್ಕ, ಕಾರ್ಯದರ್ಶಿ ಶಿವಾನಿ ಶಾಂತಾರಾಮ್, ಮಂಡಳ ಅಧ್ಯಕ್ಷ ಸುಬ್ರಾಯ ದೇವಡಿಗ, ಕಾರ್ಯದರ್ಶಿ ಭಾಸ್ಕರ ದೈಮನೆ, ಯುವ ಮೋರ್ಚಾ ಅಧ್ಯಕ್ಷ ಮಹೇಂದ್ರ ನಾಯ್ಕ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರವಿ ನಾಯ್ಕ ಜಾಲಿ, ಈಶ್ವರ ಎನ್. ನಾಯ್ಕ, ರಾಜೇಶ ನಾಯ್ಕ, ಕೇದಾರ ನಾರಾಯಣ ಕೊಲ್ಲೆ, ಲಕ್ಷಿö್ಮÃನಾರಾಯಣ ನಾಯ್ಕ, ಕೃಷ್ಣಾ ನಾಯ್ಕ ಆಸರಕೇರಿ, ಸಚಿನ್ ಮಹಾಲೆ, ಹೊನ್ನಾವರ ಮಂಡಳದ ರಾಜು ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

error: