
ಕಾರವಾರ:- ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಕೋವಿಡ್-೧೯ ಹತೋಟಿಗೆ ಬರುವವರೆಗೂ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.
ಪಾನ್ ಮಸಾಲಾ ಮತ್ತು ಅಡಿಕೆಯಿಂದ ತಯಾರಾದ ಉತ್ಪನ್ನಗಳನ್ನು ತಿಂದು ಉಗುಳುವುದರಿಂದ ಕೋವಿಡ್ -೧೯ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುವ ಸಾಧ್ಯತೆ ಇರುವದರಿಂದ ಹೊಗೆ ರಹಿತ ತಂಬಾಕು ಉತ್ಪನ್ನಗಳನ್ನು ಮಾರಾಟ ಮತ್ತು ಬಳಕೆ ಮಾಡುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ್ ಕೆ ಅವರು ಆದೇಶ ಹೊರಡಿಸಿದ್ದಾರೆ.
ಒಂದು ವೇಳೆ ಈ ಆದೇಶವನ್ನು ಉಲ್ಲಂಘಸಿದ್ದಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ-೧೮೯೭, ವಿಪತ್ತು ನಿರ್ವಹಣಾ ಕಾಯ್ದೆ-೨೦೦೫, ಐಪಿಸಿ-೧೯೬೦, ಸಿ.ಆರ್.ಪಿ.ಸಿ.ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬoಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.