September 16, 2024

Bhavana Tv

Its Your Channel

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಇದೇ ೧೩ ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಇದೇ ತಿಂಗಳ 13 ನೇ ತಾರೀಖಿನಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ.

ಹಲವು ಸಂಘಟನೆಗಳು ಕನ್ನಡಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ. ಲಾರಿ ಮಾಲೀಕರ ಸಂಘ, ಸಿಐಟಿಯು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಇನ್ನೂ ಹಲವು ಸಂಘಟನೆಗಳು ಬಂದ್‌ ಗೆ ಬೆಂಬಲ ನೀಡಿವೆ.

ಹೊಟೆಲ್ ಮಾಲೀಕರ ಸಂಘವು ಬಂದ್‌ ಗೆ ನೈತಿಕ ಬೆಂಬಲವನ್ನಷ್ಟೆ ವ್ಯಕ್ತಪಡಿಸಿದೆ. ಬಿಎಂಟಿಸಿ-ಕೆಎಸ್‌ಆರ್‌ಟಿಸಿ ಸಂಘಗಳು ಬಂದ್‌ ನಿಂದ ಹೊರಗೆ ಉಳಿದಿವೆ.

ಸರೋಜಿನಿ ಮಹಿಷಿ ಸಮಿತಿಯ ವರದಿ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ತತ್​ಕ್ಷಣವೇ ವರದಿ ಅನುಷ್ಠಾನ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿ ಈ ಬಂದ್‌ ಗೆ ಕರೆ ನೀಡಿವೆ

error: