March 21, 2023

Bhavana Tv

Its Your Channel

ಕೋವಿಡ್ -19 ನಿಂದ ಮುಕ್ತಗೊಂಡ ಉತ್ತರ ಕನ್ನಡ ಜಿಲ್ಲೆ-ಸೊಂಕಿತ ಕೊನೆಯ ವ್ಯಕ್ತಿ ಪತಂಜಲಿ ಆಸ್ಪತ್ರೆಯಿಂದ ಡಿಸ್ಚಾರ್ಜ

ಕಾರವಾರ :-ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್-19ನಿಂದ ಬಳಲುತ್ತಿದ್ದ ಕೊನೇಯ ಸೋಂಕಿತ ವ್ಯಕ್ತಿ ಕಾರವಾರದ ಪತಂಜಲಿ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದಾರೆ.

ಪತಂಜಲಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 36 ವರ್ಷದ ಭಟ್ಕಳ ಮೂಲದ ಸೋಂಕಿತ ಸಂಖ್ಯೆ 260 ಜಿಲ್ಲೆಯಲ್ಲಿ ಗುಣಮುಖ ಹೊಂದುತಿದ್ದ ಕೊನೆಯ ಕೋವಿಡ್ -19 ಸೊಂಕಿತ ವ್ಯಕ್ತಿಯಾಗಿದ್ದ.

ಇಂದು ರಾತ್ರಿ ಕೊನೇಯ ಸೋಂಕಿತನ ಬಿಡುಗಡೆಯೊಂದಿಗೆ ಉತ್ತರಕನ್ನಡ ಜಿಲ್ಲೆ ಈಗ ಕೊರೊನಾ‌‌ ಪ್ರಕರಣ‌ ದಿಂದ ಮುಕ್ತ ಜಿಲ್ಲೆಯಾಗಿದೆ.

ಮಾರ್ಚ್ 17ರಂದು ದುಬೈನಿಂದ ವಾಪಸ್ಸಾಗಿದ್ದ 36 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಪತ್ತೆಯಾಗಿತ್ತು.ಈತನಿಂದಾಗಿ 26 ವರ್ಷದ ಗರ್ಭಿಣಿ ಪತ್ನಿಗೂ ಕೊರೊನಾ‌‌ ಸೋಂಕು ತಗಲಿತ್ತು
ಪ್ರಾರಂಭದಲ್ಲಿ ಕಾಣಿಸದ ಸೊಂಕಿನ ಗುಣಲಕ್ಷಣ 28 ದಿನಗಳ ಬಳಿಕ ಈ ವ್ಯಕ್ತಿಯಲ್ಲಿ ಕಂಡುಬಂದಿತ್ತು.

ನಂತರ ವ್ಯಕ್ತಿಗೆ ಕಾರವಾರದ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.ಮೊನ್ನೆಯಷ್ಟೇ ಈತನ ಗರ್ಭಿಣಿ
ಪತ್ನಿ ಕೊರೊನಾದಿಂದ ಸಂಪೂರ್ಣ ಗುಣಮುಖಗೊಂಡು ಉಡುಪಿಯಲ್ಲಿ ಡಿಸ್ಚಾರ್ಜ್ ಆಗಿದ್ದರು.
ಇದೀಗ ಪತಿಯೂ ಗುಣಮುಖಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಭಟ್ಕಳದಲ್ಲಿ ಮಾತ್ರ 11 ಸೊಂಕಿತ ಪ್ರಕರಣ ದಾಖಲಾಗಿದ್ದು ಇಂದು ಇವರೆಲ್ಲರೂ ಗುಣಮುಖರಾಗಿ ಬಿಡುಗಡೆ ಗೊಂಡಿದ್ದು ಕಳೆದ ಎರಡು ವಾರದಿಂದ ಜಿಲ್ಲೆಯಲ್ಲಿ ಹೊಸ ಪ್ರಕರಣ ಪತ್ತೆಯಾಗದಿರುವುದು ಆಶಾದಾಯಕವಾಗಿದೆ

About Post Author

error: