
ಹೊನ್ನಾವರ ; ಶ್ರೀ ಜಿ. ಎ. ನಾಯ್ಕ್ ಇವರು ೩೦-೪-೨೦೨೦ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ, ಶ್ರೀಯುತರು ೨೬-೯-೧೯೮೬ ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಯಲ್ಲಿ ಸಹ ಶಿಕ್ಷಕರಾಗಿ ಸೇವೆ ಆರಂಭಿಸಿ, ನಂತರ ಅಳ್ಳಂಕಿ, ಮಂಕಿ, ಭಟ್ಕಳ್ ತಾಲೂಕಿನಲ್ಲಿ ಸೇವೆ ಸಲ್ಲಿಸಿದರು. ನಂತರ ಮುಖ್ಯಾಧ್ಯಾಪಕರಾಗಿ ಪದೋನ್ನತಿ ಹೊಂದಿ ಇಡುಗುಂಜಿ ಮತ್ತು ಪ್ರಭಾತ್ ನಗರ ಹೈಸ್ಕೂಲ್ ನಲ್ಲಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ಹೊನ್ನಾವರ ತಾಲೂಕಿನಲ್ಲಿ ಪ್ರಭಾರೆ ಕ್ಷೇತ್ರ ಶಿಕ್ಷಣಾಧಿಕಾರಿ ಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವಾನುಭವ ಹೊಂದಿರುವ ಇವರು ಹೊನ್ನಾವರ ತಾಲೂಕಿನ ಶಿಕ್ಷಕ ವೃಂದದ ಪ್ರೀತಿಗೆ ಪಾತ್ರರಾಗಿದ್ದರು. ಇವರು ಶಿಕ್ಷಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹರಿಸಲು ಪ್ರಯತ್ನಿಸುತ್ತಿದ್ದುದು ಶ್ಲಾಘನೀಯ. ಈ ಹಿಂದೆ ಇವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿರುತ್ತಾರೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.