
ಬನವಾಸಿ
ಉತ್ತರ ಕನ್ನಡ ಜಿಲ್ಲೆಯ ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ, ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ನಡೆದ ಸುಪ್ರಸಿದ್ಧ ಕದಂಬೋತ್ಸವ – 2020 ರ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಜಿ, ವಿಧಾನ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಜಿ, ಸಚಿವರಾದ ಸಿ.ಟಿ ರವಿ ಜಿ, ನೂತನ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ ಜಿ, ಅವರೆಲ್ಲರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮ ದಲ್ಲಿ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಶಾಸಕಿ ಶ್ರೀಮತಿ ರೂಪಾಲಿ ನಾಯಕ, ಜೀವವೈವಿಧ್ಯ ಮಂಡಳಿ ಅಧ್ಯಕ್ಷರಾದ ಶ್ರೀ ಅನಂತ ಹೆಗಡೆ ಅಶೀಸರ, ವಾಕರಸಾ ಸಂಸ್ಥೆ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ್, ಜಿಲ್ಲಾಧಿಕಾರಿಗಳಾದ ಡಾ. ಹರೀಶಕುಮಾರ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.