
ಕಾರವಾರ: ಕೊರೊನಾ ಸೋಂಕಿನ ಆತಂಕದ ನಡುವೆಯೂ ವಲಸೆ ಕಾರ್ಮಿಕರನ್ನು ತವರು ಜಿಲ್ಲೆಗಳಿಗೆ ತಲುಪಿಸಿದ ಕಾರವಾರ ಹಾಗೂ ಅಂಕೋಲ ಭಾಗದ ಕೆಎಸ್ಆರ್ಟಿಸಿ ಸಿಬ್ಬಂದಿಗೆ ಹೂಮಳೆಗೈಯುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಭಿನಂದಿಸಿದರು.
ಲಾಕ್ಡೌನ್ನಿಂದಾಗಿ 40 ದಿನಗಳಿಗೂ ಹೆಚ್ಚು ಕಾಲ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರನ್ನು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತಲುಪಿಸಿದ್ದರು. ಅಲ್ಲದೆ, ರೆಡ್ ಝೋನ್ ಪ್ರದೇಶಗಳಿಗೂ ತೆರಳಿ ಕಾರ್ಮಿಕರನ್ನು ಮನೆ ಸೇರುವಂತೆ ಮಾಡಿದ್ದರು. ಈ ಕಾರಣದಿಂದ ಕಾರವಾರದಲ್ಲಿ ಇಂದು 15 ಸಿಬ್ಬಂದಿಗೆ ಪುಷ್ಪವೃಷ್ಠಿಗೈಯ್ಯುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ