ಕುಮುಟಾ : ಬಹು ದಿನಗಳ ಬೇಡಿಕೆಯಾದ ಕುಮುಟಾ ತಾಲೂಕಿನ ಹೆಗಡೆ ಗ್ರಾಮದ ರಸ್ತೆಯನ್ನು ೧ ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು ಸೋಮವಾರ ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಗಡೆಯ ಮುಖ್ಯರಸ್ತೆಯಿಂದ ಗಣಪತಿ ದೇವಸ್ಥಾನದವರೆಗೆ ಡಾಂಬರಿಕರಣ ಹಾಗೂ ಗಡೆಯ ಪೇಟೆಯಿಂದ ದೇವಸ್ಥಾನದವರೆಗೆ ಕಾಂಕ್ರೀಟ್ಕರಣವಾಗಲಿದೆ ಎಂದರು. ಈಗಾಗಲೇ ಡಾಂಬರಿಕರಣ ಮುಕ್ತಾಯವಾಗಿದ್ದು ಕಾಂಕ್ರಿಟ್ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು ಇನ್ನು ಕೆಲವೇ ದಿನದಲ್ಲಿ ಮುಗಿಯಲಿದೆ ಕಾಮಗಾರಿ ಗುಣಮಟ್ಟ ಒಳ್ಳೆಯದಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. ಇದೇ ಸಂದರ್ಭದಲ್ಲಿ ಮುಖ್ಯರಸ್ತೆಗೆ ಹೊಂದಿಕೊAಡಿರುವ ಕರೆಂಟ್ ಕಂಬಗಳನ್ನು ಹಿಂದಕ್ಕೆ ಹಾಕಿ ರಸ್ತೆ ಮಾಡಲು ಅನುಕೂಲ ಮಾಡಿಕೊಡುವಂತೆ ವಿದ್ಯುಚ್ಚಕ್ತಿ ನಿಗಮದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಅವರಿಗೆ ಶಾಸಕರು ಸೂಚಿಸಿದರು. ಈ ಕುರಿತು ಹೆಗಡೆ ಪಂಚಾಯಿತಿ ಪಿಡಿಒ ಶಿವಾನಂದ ಜೋಶಿ ರವರಿಗೂ ಕೆಲವೊಂದು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದರು. ಗ್ರಾಮಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.