
ಭಟ್ಕಳ; ತಾಲೂಕಿನ ಬೆಂಗ್ರೆ ಪಂಚಾಯತ್ ವ್ಯಾಪ್ತಿಯ ಪಡುಶಿರಾಲಿ ಮಜಿರೆಯಲ್ಲಿ ಸರಿ ಸುಮಾರು ೩೦ ಮನೆಗಳಿಗೆ ಸಂಪರ್ಕಿಸುವ ನೂತನ ರಸ್ತೆಯನ್ನು ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಮಂಗಳವಾರ ಶಾಸಕ ಸುನೀಲ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಶಾಸಕರು ಹಲವಾರು ವರ್ಷಗಳಿಂದ ಇಲ್ಲಿ ಸ್ಥಳಾವಕಾಶದ ಸಮಸ್ಯೆ ಇದ್ದು ರಸ್ತೆಯ ಸಂಪರ್ಕವೇ ಇಲ್ಲಾದಂತಾಗಿತ್ತು. ಎಲ್ಲಾ ಸಮಸ್ಯೆಗಳನ್ನು ಊರಿನ ಮುಖಂಡರ ಸಮ್ಮುಖದಲ್ಲಿ ಬಗೆಹರಿಸಿ ರಸ್ತೆ ನಿರ್ಮಾಣವನ್ನು ಮಾಡಿಕೊಡಲಾಗಿದ್ದು ಕಾಮಗಾರಿ ಗುಣಮಟ್ಟ ಉಳ್ಳದಾಗಿದೆ. ಕೆಲ ದಿನಗಳಲ್ಲಿ ರಸ್ತೆ ಕಾಮಗಾರಿ ಮುಗಿಯಲಿದ್ದು ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಇದನ್ನು ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಗ್ರಾಮದ ಇನ್ನು ಹಲವು ಸಮಸ್ಯೆ ಬಗೆಹರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.