April 20, 2024

Bhavana Tv

Its Your Channel

ರಾಜ್ಯದೆಲ್ಲಡೆ ಪ್ರತಿ ರವಿವಾರ ಸಂಪೂರ್ಣ ಲಾಕ್ ಡೌನ್; ನಾಳೆಯಿಂದ ಸಾರಿಗೆ ಬಸ್ಸುಗಳ ಓಡಾಟ ಸೇರಿ ವಿವಿಧ ರೀತಿಯ ಸೇವೆಗೆ ಅವಕಾಶ ಮುಖ್ಯಮಂತ್ರಿ ಬಿ.ಎಸ್.ವೈ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿ0ದ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು, ಕಂಟೈನಮೆ0ಟ್ ಝೋನ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕಾನೂನು ಮೀರಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಜನರ ಓಡಾಟಕ್ಕಾಗಿ ನಾಳೆಯಿಂದ ಬಿಎಂಟಿಸಿ, ಕೆಎಸ್.ಆರ್.ಟಿಸಿ ಸೇರಿದಂತೆ ಎಲ್ಲ ಬಸ್‌ಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ೪.೦ಗೆ ಸಂಬ0ಧಿಸಿದoತೆ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಅದಕ್ಕೆ ಸಂಬoಧಿಸಿದoತೆ ಇಂದು ಸಚಿವ ಸಂಪುಟದ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಅವರು ತಿಳಿಸಿದರು. ನಾಳೆಯಿಂದ ಮಾಲ್, ಚಿತ್ರಮಂದಿರ, ಹೋಟೆಲ್ ಬಿಟ್ಟು ಎಲ್ಲಾ ಅಂಗಡಿ ಓಪನ್ ಮಾಡಬಹುದು. ಆದರೆ, ಪ್ರತೀ ಭಾನುವಾರ ರಾಜ್ಯವನ್ನು ಸಂಪೂರ್ಣವಾಗಿ ಲಾಕ್’ಡೌನ್ ಮಾಡಲಾಗುತ್ತದೆ. ಒಂದು ಬಸ್‌ನಲ್ಲಿ ಕೇವಲ ೩೦ ಜನರಿಗೆ ಪ್ರಯಾಣ ಮಾಡುವ ಅವಕಾಶ ನೀಡಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುವವರು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಹಾಕದೇ ಇದ್ದರೆ ದಂಡ ವಿಧಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಹೊರ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್ ಮಾಡುವ ನಿರ್ಧಾರ ಮುಂದುವರಿಸಲು ನಿರ್ಧರಿಸಲಾಗಿದೆ. ಬೇರೆ ರಾಜ್ಯದಿಂದ ಅನವಶ್ಯಕವಾಗಿ ಬರಲು ಅವಕಾಶವಿಲ್ಲ ಎಂದು ತಿಳಿಸಿದರು. ಆಟೋ, ಟ್ಯಾಕ್ಸಿ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಅವರಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಾಳೆಯಿಂದ ಮಾಲ್, ಸಿನಿಮಾ ಥಿಯೇಟರ್, ಹೋಟೆಲ್ ಬಿಟ್ಟು ಉಳಿದ ಎಲ್ಲ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ರಾಜ್ಯದೊಳಗೆ ಓಡಾಡಲು ರೈಲುಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಹೊರಗಡೆಯಿಂದ ಬರುವ ಟ್ರೇನ್‌ಗಳಿಗೆ ಅವಕಾಶ ನೀಡುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು. ಆದರೆ ಭಾನುವಾರ ಇಡೀ ದಿನ ಸಂಪೂರ್ಣ ಲಾಕ್‌ಡೌನ್ ಇರುತ್ತದೆ, ಜನರ ಓಡಾಟಕ್ಕೂ ಅವಕಾಶ ಇರುವುದಿಲ್ಲ ಎಂದರು. ಬೆಳಗ್ಗೆ ೭ ರಿಂದ ೯ ಹಾಗೂ ಸಾಯಂಕಾಲ ೫ ರಿಂದ ೭ಗಂಟೆ ವರೆಗೆ ಎಲ್ಲ ಪಾರ್ಕ್ಗಳಲ್ಲಿ ಓಡಾಟ ಮಾಡಲು ಅವಕಾಶ ನೀಡಲಾಗಿದೆ. ಬಸ್ ಪ್ರಯಾಣದರ ಸದ್ಯಕ್ಕೆ ಹೆಚ್ಚಿಸುವುದಿಲ್ಲ. ಈಗ ಆಗಿರುವ ನಷ್ಟವನ್ನು ಸರ್ಕಾರವೇ ತುಂಬಿಕೊಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು. ಅನಿವಾರ್ಯವಿದ್ದರೆ ಮಾತ್ರ ಹೊರ ರಾಜ್ಯದಿಂದ ಬರಬೇಕು. ಹೊರ ರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಚಾಲಕ ಸೇರಿ ಮೂವರು ಮಾತ್ರ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡಬಹುದು. ಇನ್ನು ಮೇ.೩೧ರವರೆಗೂ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು ಹಾಗೂ ಕೇರಳ ರಾಜ್ಯ ಜನತೆಗೆ ರಾಜ್ಯ ಪ್ರವೇಶಿಸಲು ಅವಕಾಶವಿಲ್ಲ.
ಒಟ್ಟಾರೆ ಇಷ್ಟು ದಿನ ಲಾಕ್ ಡೌನ್ ಸಮಸ್ಯೆಗೆ ಸಿಕಲುಕಿದವರಿಗೆ ರಾಜ್ಯ ಸರ್ಕಾರ ಬಿಗ್ ರಿಲೀಪ್ ನೀಡಿದ್ದರೂ ಮಾಸ್ಕ ಮತ್ತು ಸಾಮಾಜಿಕ ಅಂತರ ಅನಿವಾರ್ಯವಾಗಿದೆ. ಮಾಸ್ಕ ಧರಿಸದೇ ಇದ್ದರೆ ದಂಡ ವಿಧಿಸಲಾಗುವುದು.

error: