March 25, 2024

Bhavana Tv

Its Your Channel

೮೪ ಹೊಸ ಪ್ರಕರಣ, ಒಟ್ಟು ಸೋಂಕಿತರ ಸಂಖ್ಯೆ ೧೨೩೧

ಬೆಂಗಳೂರು: ಕೊರೊನಾ ವೈರಸ್ ಸೋಂಕಿಗೆ ರಾಜ್ಯದ ವಿವಿಧೆಡೆ ಮೇ ೧೭ರ ಸಂಜೆ ೫ರಿಂದ ಮೇ ೧೮ರ ಮಧ್ಯಾಹ್ನ ೧೨ರವರೆಗೆ ಒಟ್ಟು ೮೪ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ೧,೨೩೧ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇದುವರೆಗೆ ೫೨೧ ಮಂದಿ ಸೋಂಕಿನಿAದ ಗುಣಮುಖರಾಗಿದ್ದು, ೩೭ ಜನರು ಮೃತಪಟ್ಟಿದ್ದಾರೆ. ಉಳಿದಂತೆ ೬೭೨ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಉತ್ತರ ಕನ್ನಡದಲ್ಲಿ ಇಂದು ೮ ಕೋರೊನಾ ಪಾಸಿಟಿವ್,
ಇಂದು ಧೃಢಪಟ್ಟ ಎಂಟು ಜನರಲ್ಲಿ ಏಳು ಜನ ಮುಂಬೈನಿAದ ವಾಪಾಸ್ ಜಿಲ್ಲೆಗೆ ಬಂದಿದ್ದು, ಭಟ್ಕಳ ಮೂಲದ ಎರಡು ವರ್ಷದ ಬಾಲಕಿಗೆ ಈಗಾಗಲೇ ಸೋಂಕು ತಗುಲಿರುವವರ ಸಂಪರ್ಕದಿoದ ಸೋಂಕು ತಗುಲಿದೆ.
ಹೊನ್ನಾವರದ ನಾಲ್ವರು ಸೋಂಕಿತರು ಒಂದೇ ಕುಟುಂಬದವರಾಗಿದ್ದು ಎಲ್ಲರು ಮುಂಬೈನಿoದ ಬಂದ ನಂತರ ಪಟ್ಟಣದ ಪ್ರಭಾತ್ ನಗರದಲ್ಲಿ ಇರುವ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದರು.

ಇನ್ನು ಮುಂಬೈ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮುಂಡಗೋಡ ತಾಲೂಕಿನ ಇಬ್ಬರಿಗೆ ಸೋಂಕು ದೃಡಪಟ್ಟಿದ್ದು ಸೋಂಕಿತರ ಎರಡು ಗ್ರಾಮದಲ್ಲಿ ಜನರ ಓಡಾಟವನ್ನ ನಿರ್ಭಂದಿಸಲಾಗಿದೆ.

ಇದಲ್ಲದೇ ಮುಂಬೈನಿoದ ವಾಪಾಸ್ ಬಂದು ಮುರ್ಡೇಶ್ವರದ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ತಗಲಿದೆ.

ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಅರ್ಧ ಶತಕ ದಾಟಿದೆ. ಸದ್ಯ ೪೦ ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿ ಇದ್ದು, ಒಟ್ಟು ಸೋಂಕಿತರ ಸಂಖ್ಯೆ ೫೧ ಆಗಿದೆ. ೧೧ ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಓರ್ವ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ೩೦ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಆಯಾ ತಾಲೂಕು ಆಸ್ಪತ್ರೆಯಲ್ಲೇ ಇದ್ದಾರೆ.

ಭಟ್ಕಳ ಪಟ್ಟಣವೊಂದರಲ್ಲೇ ಒಟ್ಟು ೪೪ ಸೋಂಕಿತರು ಇದ್ದು, ೩೩ ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ೧೧ ಮಂದಿ ಗುಣಮುಖರಾದವರಾಗಿದ್ದಾರೆ.

error: