ಕಾರವಾರ: ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕರವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ತಾಲ್ಲೂಕಿನ ಗಾಡಸಾಯಿ ಹೋಬಳಿಯ ನಾಡಕಚೇರಿ ಕಟ್ಟಡವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು ಸಾರ್ವಜನಿಕರಿಗೆ ನಾಡ ಕಚೇರಿಯಿಂದ ಸಿಗಬೇಕಾದ ಸೌಲಭ್ಯಗಳು ತ್ವರಿತವಾಗಿ ತಲುಪಬೇಕು ಎನ್ನುವ ಉದ್ದೇಶದಿಂದ ಕಡಿಮೆ ಅವಧಿಯಲ್ಲಿ ಈ ಕಟ್ಟಡವನ್ನು ಅಚ್ಚುಕಟ್ಟಾಗಿ ನೆರವೇರಿಸಿದ್ದಕ್ಕೆ ಅಧಿಕಾರಿಗಳಿಗೆ ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಇದೇ ರೀತಿ ಎಲ್ಲಾ ಕಾರ್ಯಗಳು ಸರಿಯಾದ ಸಮಯದಲ್ಲಿ ನಡೆದರೆ ಸಾರ್ವಜನಿಕರಿಗೆ ಕಚೇರಿ ಕೆಲಸಗಳಲ್ಲಿ ಯಾವುದೇ ವಿಳಂಬವಾಗುವುದಿಲ್ಲ. ನಾಡ ಕಚೇರಿಯಲ್ಲಿ ಸಾರ್ವಜನಿಕರಿಗೆ ಇರುವ ಸೌಲಭ್ಯಗಳು ಸರಿಯಾಗಿ ನಡೆಯಬೇಕು. ಇಷ್ಟು ದಿನಗಳ ಕಾಲ ಬಾಡಿಗೆ ಕಟ್ಟಡದಲ್ಲಿ ಇದ್ದ ಕಚೇರಿಯು ಈಗ ಸ್ವಂತ ಕಟ್ಟಡಕ್ಕೆ ವರ್ಗಾಯಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ. ತಮ್ಮ ಊರಿನಲ್ಲಿಯೇ ಇರುವ ಈ ಕಚೇರಿಯನ್ನು ತಮ್ಮ ಮನೆಯಂತೆ ನೋಡಿಕೊಳ್ಳಬೇಕು. ನಾಡ ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು
ಈ ಸಂದರ್ಭದಲ್ಲಿ ತಹಶಿಲ್ದಾರರು ಸೇರಿದಂತೆವಿವಿಧ ಅಧಿಕಾರಿವರ್ಗದವರು ಹಾಗೂ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
More Stories
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ.
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಭಟ್ಕಳವತಿಯಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮೆರವಣಿಗೆ ಮೂಲಕ ಬಂದು ಸಹಾಯಕ ಆಯುಕ್ತರಿಗೆ ಮನವಿ.
ತುಳುನಾಡಿನ ಕಾರಣೀಕ ಮೆರೆದ ಕಲ್ಜಿಗ ಸಿನೇಮಾ, ಕಾಂತಾರದ ಬೆನ್ನಿಗೇ ಮತ್ತೊಂದು ಕಲಾತ್ಮಕ ಚಿತ್ರ ಕೊಟ್ಟ ಕರಾವಳಿ