June 15, 2024

Bhavana Tv

Its Your Channel

ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.

ಕುಮಟಾ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ಅವರು ಪಟ್ಟಣದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿ ರಾಘವೇಂದ್ರ ಜಲಗಾಸರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ದಿನಕರ ಶೆಟ್ಟಿ ಮಾತನಾಡಿ, ಕಳೆದ 5 ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ನಮಗೆ ಶ್ರೀರಕ್ಷೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಟಕಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ನಾಮಪತ್ರ ಸಲ್ಲಿಸುವ ವೇಳೆ ಸಹಸ್ರಾರು ಅಭಿಮಾನಿಗಳು ಮತ್ತು ನಿಷ್ಠಾವಂತ ಕಾರ್ಯಕರ್ತರು ಮೆರವಣಿಗೆಯಲ್ಲಿ ಆಗಮಿಸಿ, ನನಗೆ ಮತ್ತಷ್ಟು ಬಲ ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗೆಲುವಿಗೆ ನಮ್ಮ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದು, ಈ ಬಾರಿ ಮತದಾರ ಮತ್ತೊಮ್ಮೆ ನನಗೆ ಮತ ನೀಡಿ, ನನ್ನನ್ನು ಆಯ್ಕೆ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಅಧಿಕಾರಕ್ಕೆ ಬರುವಂತಾಗಿ, ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಬೇಕು ಎಂದು ವಿನಂತಿಸಿದರು.

  ಕಳೆದ ಬಾರಿ ಕುಮಟಾ-ಹೊನ್ನಾವರ ಕ್ಷೇತ್ರದ ಮಹಾಜನತೆ ಬಾರಿ ಮತಗಳ ಅಂತರದಿAದ ನನ್ನನ್ನು ಗೆಲ್ಲಿಸಿ, ಶಾಸಕನಾಗಿ ಆಯ್ಕೆ ಮಾಡಿದ್ದರು. ಅದೇ ರೀತಿ ಈ ಬಾರಿಯೂ ನನಗೆ ಹೆಚ್ಚಿನ ಮತ ನೀಡಿ, ಮತ್ತೊಮ್ಮೆ ಶಾಸಕನಾಗಿ ಆಯ್ಕೆ ಮಾಡಿ, ಇನ್ನೊಮ್ಮೆ ಜನ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು ಎಂದರು.

ನಾಮಪತ್ರ ಸಲ್ಲಿಸುವ ವೇಳೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿರಿಯ ಮುಖಂಡ ವಿನೋದ ಪ್ರಭು, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಗೋವಾ ರಾಜ್ಯದ ವಾಸ್ಕೋ ಶಾಸಕ ಶಾಂಕರ, ಹಾಲಕ್ಕಿ ಒಕ್ಕಲಿಗ ಸಮಾಜದ ಜಿಲ್ಲಾಧ್ಯಕ್ಷ ಗೋವಿಂದ ಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯಕ, ದಿನಕರ ಶೆಟ್ಟಿ ಪತ್ನಿ ಉಷಾ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
error: