March 29, 2024

Bhavana Tv

Its Your Channel

66 ದಿನಗಳ ಬಳಿಕ ಭಟ್ಕಳ ಲಾಕ್ ಡೌನ್ ನಲ್ಲಿ ಸಡಿಲಿಕೆ; ಎಸ್ ಪಿ ಶಿವಪ್ರಕಾಶ್ ದೇವರಾಜು

ಭಟ್ಕಳ: ನಾಳೆಯಿಂದ ಭಟ್ಕಳದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಿ, ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದರು.

ಗುರುವಾರದಂದು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿರಾಣಿ, ಮೆಡಿಕಲ್, ದಿನಸಿ, ಬ್ಯಾಂಕ್, ಗ್ಯಾರೇಜ್, ಸಲೂನ್, ಪೆಟ್ರೋಲ್ ಬಂಕ್, ಕಟ್ಟಡ ನಿರ್ಮಾಣದ ಸಾಮಗ್ರಿಗಳ ಅಂಗಡಿಗಳಿಗೆ, ಆಟೋ ಮೊಬೈಲ್, ಬಟ್ಟೆ, ಸೂಪರ್ ಮಾರ್ಕೆಟ್ ಗಳನ್ನು ಷರತ್ತುಬದ್ಧವಾಗಿ ತೆರೆಯಲು ಅವಕಾಶ ನೀಡಲಾಗುತ್ತಿದೆ. ಆಟೊಗಳನ್ನು ಓಡಿಸಲೂ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಜೂನ್ 8ರವರೆಗೆ ಈ ಸಡಿಲಿಕೆ‌ ಜಾರಿಯಲ್ಲಿದ್ದು, ಜನರ ಓಡಾಟದ ಮೇಲೆ ನಿಗಾ ಇಡಲಾಗುತ್ತದೆ. ನಂತರ ಇನ್ನಷ್ಟು ಸಡಿಲಿಕೆಗೆ ಚಿಂತನೆ ಮಾಡಲಿದ್ದೇವೆ. ಈ ವೇಳೆ ಸಾರ್ವಜನಿಕರು, ಮಾಧ್ಯಮದವರು, ಮುಖಂಡರುಗಳ ಅಭಿಪ್ರಾಯ ಪಡೆದು ಮುಂಬರುವ ದಿನಗಳಲ್ಲಿ ಹೇಗೆ ನಿಯಂತ್ರಣ ಇಡಬೇಕಿದೆ ಎಂಬ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದರು.

ಲಾಕ್ ಡೌನ್ ಸಡಿಲಿಕೆಯ ಅವಧಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆ ಕಡ್ಡಾಯವಾಗಿದೆ. ಅಂಗಡಿಗೆ ಬರುವ ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಮಾಸ್ಕ್ ಧರಿಸುವಂತೆ ನೋಡಿಕೊಳ್ಳುವುದು ಅಂಗಡಿಕಾರರ ಜವಾಬ್ದಾರಿ. ಇದಕ್ಕೆ ವಿಫಲವಾದಲ್ಲಿ ಅವರ ಅಂಗಡಿ ಪರವಾನಿಗೆ ರದ್ದಾಗಲಿದೆ ಎಂದು ಹೇಳಿದರು

error: